ಬಳ್ಳಾರಿ: ಕೋವಿಡ್ ನಿಯಂತ್ರಿಸುವಲ್ಲಿ ಜಿಲ್ಲೆಯು ಇಡೀ ದೇಶಕ್ಕೆ ಮಾದರಿಯಾವ ನಿಟ್ಟಿನಲ್ಲಿ ವೈದ್ಯರು ಶ್ರಮಿಸಬೇಕು ಮತ್ತು ಜಿಲ್ಲೆಯನ್ನು ಕೊರೊನಾ ಮುಕ್ತ ಮಾಡಬೇಕು ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಸಲಹೆ ನೀಡಿದ್ದಾರೆ.
ಕೊರೊನಾ ನಿಯಂತ್ರಿಸುವಲ್ಲಿ ಬಳ್ಳಾರಿ ದೇಶಕ್ಕೆ ಮಾದರಿಯಾಗ್ಬೇಕು: ಸೋಮಶೇಖರ ರೆಡ್ಡಿ - Bellary should be a model for control Corona
ವೆನೂಸ್ ಕಂಪನಿಯಿಂದ ಉಚಿತವಾಗಿ ನೀಡಲಾದ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಸರ್ಗಳನ್ನು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಶಾಸಕ ಸೋಮಶೇಖರ ರೆಡ್ಡಿ ವಿತರಿಸಿದರು.
ಮುಖ್ಯಮಂತ್ರಿ ಮತ್ತು ಆರೋಗ್ಯಮಂತ್ರಿಗಳ ಮನವಿಗೆ ಸ್ಪಂದಿಸಿದ ವೆನೂಸ್ ಕಂಪನಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಪಿಪಿಇ ಕಿಟ್, ಮಾಸ್ಕ್, ಹಾಗೂ ಸ್ಯಾನಿಟೈಸರ್ಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದರು.
ಜಿಲ್ಲೆಯಲ್ಲಿ ಒಟ್ಟು 14 ಪಾಸಿಟಿವ್ ಕೇಸ್‍ಗಳು ದೃಢಪಟ್ಟಿದ್ದು, ಈ ಹಿಂದೆ 8 ಜನರು ಗುಣಮುಖರಾಗಿದ್ದರು. ಇಂದು ಮಧ್ಯಾಹ್ನ ಒಬ್ಬ ಗುಣಮುಖವಾಗಿ ಅಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಈ ಮೂಲಕ ಒಟ್ಟು 9 ಜನರು ಗುಣಮುಖರಾಗಿದ್ದಾರೆ. ಸದ್ಯ ಉಳಿದ ಐವರು ಸೋಂಕಿತರಿಗೆ ಚಿಕಿತ್ಸೆ ಇದಕ್ಕಾಗಿ ಶ್ರಮಿಸುತ್ತಿರುವ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ ಎಂದರು.