ಕರ್ನಾಟಕ

karnataka

ETV Bharat / state

ಬಳ್ಳಾರಿಯನ್ನ ಸುಂದರ ನಗರವಾಗಿಸುವ ಗುರಿ ಇದೆ: ಸಚಿವ ಬಸವರಾಜ್​​​​​ ಭರವಸೆ - ಬಳ್ಳಾರಿ ನಗರಾಭಿವೃದ್ಧಿ ಸಚಿವರ ಸಭೆ.

ಬಳ್ಳಾರಿ ನಗರವನ್ನು ಅತಿ ಸುಂದರ ನಗರವನ್ನಾಗಿ ಮಾಡಬೇಕು ಎಂದು ನಗರಾಭಿವೃದ್ಧಿ ಸಚಿವರಾದ ಬಿ.ಎ ಬಸವರಾಜ್ ಅಧಿಕಾರಿಗಳಿಗೆ ಸೂಚನೆ ಕೊಟ್ಟರು.

Bellary should be made beautiful: Minister BA Basavaraj
ಬಳ್ಳಾರಿಯನ್ನು ಅತಿ ಸುಂದರವಾಗಿ ಮಾಡಬೇಕು : ಸಚಿವ ಬಿ.ಎ ಬಸವರಾಜ್

By

Published : May 12, 2020, 7:58 PM IST

ಬಳ್ಳಾರಿ: ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಗರಾಭಿವೃದ್ಧಿ ಸಚಿವರಾದ ಬಿ.ಎ ಬಸವರಾಜ್ ನೇತೃತ್ವದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆ ಬಳಿಕ ಮಾತನಾಡಿದ ನಗರಾಭಿವೃದ್ಧಿ ಸಚಿವ ಬಿ.ಎ ಬಸವರಾಜ್, ಬೆಳಗ್ಗೆ 6 ಗಂಟೆಯಿಂದಲ್ಲೇ ಬಳ್ಳಾರಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಬಡಾವಣೆ, ಮಾರುಕಟ್ಟೆ, ರಸ್ತೆ, ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆಗಳ ಬಗ್ಗೆ ವೀಕ್ಷಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದೇನೆ ಎಂದರು.

ಸಚಿವ ಬಿ.ಎ ಬಸವರಾಜ್

ಬಳ್ಳಾರಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ :

ಬಳ್ಳಾರಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಇಲ್ಲಿನ ಅಧಿಕಾರಿಗಳು, ಶಾಸಕರು, ಸಂಸದರು ತಿಳಿಸಿದ್ದಾರೆ. ಅದಕ್ಕಾಗಿಯೇ 24*7 ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎನ್ನುವ ಉದ್ದೇಶದಿಂದ ಮೂರು ನಾಲ್ಕು ವರ್ಷಗಳ ಹಿಂದೆಯೇ ಅನುಮೋದನೆ ನೀಡಲಾಗಿತ್ತು. ಆದ್ರೆ ಕಾಮಗಾರಿ ನಿಧಾನಗತಿಯಲ್ಲಿ ಇದೆ. ಹಾಗಾಗಿ ಜೂನ್ 29ರ ಒಳಗೆ ಕಾಮಗಾರಿ ಮುಗಿಸಿ ಎಂದು ಗುತ್ತಿಗೆದಾರರಿಗೆ ಸೂಚಿಸಿದ್ದೇನೆ ಎಂದರು.

ನಗರದಲ್ಲಿ ಕಳೆದ 20 - 30 ವರ್ಷಗಳಿಂದ ಇರುವ ಯುಜಿಡಿಗಳನ್ನು ಹೊಸ ರೂಪ ನೀಡುವ ಪ್ರಯತ್ನ ಮಾಡಬೇಕು. ಮತ್ತು ಅಮೃತ ಯೋಜನೆಯಲ್ಲಿ ನಡೆಯುವ ಕಾಮಗಾರಿಗಳನ್ನು ಬೇಗ ಮುಗಿಸಲು ತಿಳಿಸಿದ್ದೇನೆ ಎಂದರು. ಬಳ್ಳಾರಿ ನಗರವನ್ನು ಅತಿ ಸುಂದರ ನಗರವನ್ನಾಗಿ ಮಾಡಬೇಕು ಎನ್ನುವ ಗುರಿಯನ್ನು ಹೊಂದಿದ್ದೇವೆ ಈ ಸಂಬಂಧ ಅಧಿಕಾರಿಗಳಿಗೂ ಸೂಚಿಸಿದ್ದೇನೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.

ಸಚಿವರು ನಡೆಸಿದ ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್, ಜಿಲ್ಲಾ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ಸಂಸದ ವೈ.ದೇವೇಂದ್ರಪ್ಪ, ಶಾಸಕ ಜಿ.ಸೋಮಶೇಖರ್ ರೆಡ್ಡಿ ಸೇರಿದಂತೆ ಹಲವರಿದ್ದರು.

ABOUT THE AUTHOR

...view details