ಬಳ್ಳಾರಿ:ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಳ್ಳಾರಿ: ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಸಾವು - Bellary Fisherman death News
ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ಮತ್ತು ಕೂಡ್ಲಿಗಿ ತಾಲೂಕಿನಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೂವಿನಹಡಗಲಿ ತಾಲೂಕಿನ ಉಪನಾಯಕನಹಳ್ಳಿ ಬಳಿಯ ಚೆಕ್ ಡ್ಯಾಂನಲ್ಲಿ ಮೀನು ಹಿಡಿಯಲು ಹೋಗಿದ್ದ ಮೀನುಗಾರನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ವ್ಯಾಸ ಮಲ್ಲಾಪೂರ ತಾಂಡಾದ ಯಮನನಾಯ್ಕ(48) ಮೃತರು. ಮೀನು ಹಿಡಿಯುವ ಸಲುವಾಗಿ ಚೆಕ್ ಡ್ಯಾಂನಲ್ಲಿ
ಬಲೆ ಬೀಸಿ ನೀರಿಗೆ ಇಳಿದಿದ್ದಾನೆ. ಈ ವೇಳೆ ನೀರಿನ ಆಳ ಅರಿಯದೆ ಕಾಲು ಜಾರಿ ಬಿದ್ದು, ಸಾವನ್ನಪ್ಪಿದ್ದಾನೆ. ಸದ್ಯ ಈ ಕುರಿತು ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಜಿಲ್ಲೆಯ ಕೂಡ್ಲಿಗಿ ತಾಲೂಕಿನ ನೆಲಬೊಮ್ಮನಹಳ್ಳಿಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದ್ದು, ಬುದ್ಧಿವಾದ ಹೇಳಿದ್ದಕ್ಕೆ ಮಾನಸಿಕವಾಗಿ ನೊಂದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದೊಡ್ಡ ಈರಣ್ಣ(50) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಪರೀತ ಮದ್ಯ ವ್ಯಸನಿಯಾಗಿದ್ದ ಈರಣ್ಣನಿಗೆ ಮದ್ಯ ವ್ಯಸನದಿಂದ ಮುಕ್ತನಾಗು ಎಂದು ಬುದ್ಧಿವಾದ ಹೇಳಲಾಗಿದೆ. ಇದರಿಂದ ಮಾನಸಿಕವಾಗಿ ನೊಂದ ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಕುಟುಂಬದ ಮೂಲಗಳು ತಿಳಿಸಿವೆ. ಈ ಕುರಿತು ಕಾನಾಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.