ಬಳ್ಳಾರಿ: ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿರುವ ಬೃಹತ್ ಸಮಾವೇಶದ ಸಿದ್ಧತಾ ಕಾರ್ಯ ಆರಂಭಿಸುವ ಮುನ್ನ ಇಂದು ಬೆಳಗ್ಗೆ ಕಾಂಗ್ರೆಸ್ ನಾಯಕರು ಸುದರ್ಶನ ಹೋಮ ಮಾಡಿದರು.
ರಾಹುಲ್ ಗಾಂಧಿ ಭಾರತ್ ಜೋಡೋ ಪಾದಯಾತ್ರೆ ಅಂಗವಾಗಿ ಅಕ್ಟೋಬರ್ 15 ರಂದು ಇಲ್ಲಿನ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರ ನಾಯಕರು ಭಾಗಿಯಾಗಲಿದ್ದಾರೆ. ಸಮಾವೇಶದ ತಯಾರಿ ಆರಂಭಿಸುವ ಮುನ್ನ ಕೆಪಿಸಿಸಿ ಕಾರ್ಯದರ್ಶಿ ಜೆ.ಎಸ್ ಆಂಜನೇಯಲು ನೇತೃತ್ವದಲ್ಲಿ ಸ್ಥಳದಲ್ಲಿ ಸುದರ್ಶನ ಹೋಮ ನಡೆಸಲಾಗುತ್ತಿದೆ.