ಬಳ್ಳಾರಿ:ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮಕ್ಕೆ ತೆರಳುವ ಮಾರ್ಗದ ತಿರುವಿನಲ್ಲಿ ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಬೈಕ್ ಸವಾರ ಸಾವು - ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮ
ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮಕ್ಕೆ ತೆರಳುವ ಮಾರ್ಗದ ತಿರುವಿನಲ್ಲಿ ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದ ರಾಜಶೇಖರ(46) ಮೃತ ದುರ್ದೈವಿ. ಇವರು ತಾಲೂಕಿನ ಕೆ.ಸೂಗೂರು ಗ್ರಾಮದಲ್ಲಿನ ತಮ್ಮ ಸಂಬಂಧಿಕರ ಮನೆಗೆ ತೆರಳಿ ವಾಪಾಸ್ ಬರುವಾಗ ಕರ್ಚಿಗನೂರು ಗ್ರಾಮ ಮಾರ್ಗದ ತಿರುವಿನ ಬಳಿ ಯಮಸ್ವರೂಪಿಯಂತೆ ಬಂದ ಅಪರಿಚತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ರಾಜಶೇಖರ ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಸಿರುಗುಪ್ಪ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಸಿಪಿಐ ಮಹಾಂತೇಶ ಸಜ್ಜನ್ ಮತ್ತು ಪಿಎಸ್ಐ ಗಂಗಪ್ಪ ಬುರ್ಲಿ ಭೇಟಿ ನೀಡಿ 'ಹಿಟ್ ಅಂಡ್ ರನ್' ಎಂದು ಶಂಕಿಸಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.