ಬಳ್ಳಾರಿ:ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿ ಹತ್ತಿರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಪ್ರಯಾಣಿಸುತ್ತಿದ್ದ ಬೈಕ್ ಸವಾರ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪಿದ್ದಾನೆ.
ಖಾನಾಹೊಸಳ್ಳಿ ಪ್ಲೈ-ಓವರ್ ಮೇಲೆ ಈ ಘಟನೆ ನಡೆದಿದ್ದು, ಮೃತರ ಮಾಹಿತಿ ಲಭ್ಯವಾಗಿಲ್ಲ. ರಾಷ್ಟ್ರೀಯ ಹೆದ್ದಾರಿಯ ಕೆಲ ಪ್ರದೇಶಗಳಲ್ಲಿ ಲೈಟ್ ಹಾಕದಿರುವುದು ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.