ಬಳ್ಳಾರಿ: ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಜಿಲ್ಲೆಯ ಕೂಡ್ಲಿಗಿ-ಮೊರಬ ಕ್ರಾಸ್ ಹತ್ತಿರದ ರಾಷ್ಟ್ರೀಯ ಹೆದ್ಧಾರಿ 50ರಲ್ಲಿ ನಡೆದಿದೆ.
ಬೈಕ್ಗೆ ಕಾರು ಡಿಕ್ಕಿ: ಸವಾರ ಸ್ಥಳದಲ್ಲಿಯೇ ಸಾವು - bellary accident today
ಬಳ್ಳಾರಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾನೆ. ಹಿಂಬದಿ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿ ಗ್ರಾಮದ ಕೆ.ಉಮೇಶ್ (30) ಮೃತ. ಇನ್ನೂ ಬೈಕ್ನ ಹಿಂಬದಿ ಕುಳಿತಿದ್ದ ಸವಾರ ತೀವ್ರವಾಗಿ ಗಾಯಗೊಂಡಿದ್ದು, ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.