ಹೊಸಪೇಟೆ(ವಿಜಯನಗರ): ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮಲಾಪುರ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನಡೆದಿದೆ.
ಹೊಸಪೇಟೆ ಬಳಿ ಡಿವೈಡರ್ ಗೆ ಬೈಕ್ ಡಿಕ್ಕಿ.. ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ - Divider accedent
ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೂಡ್ಲಿಗಿ ತಾಲೂಕಿನ ಅಮಲಾಪುರ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಂಭವಿಸಿದೆ.
ಅಪಘಾತ
ದಾಸೋಬರಹಳ್ಳಿ ಶಂಬಣ್ಣ(28) ಮೃತ ಬೈಕ್ ಸವಾರ. ಹಿಂಬದಿ ಕುಳಿತಿದ್ದ ನಾಗರಾಜ ಎಂಬಾತ ಗಾಯಗೊಂಡಿದ್ದು, ಆತನನ್ನು ಕೂಡ್ಲಿಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಈ ಇಬ್ಬರು ಇಂದು ಬೆಳಗ್ಗೆ ಅಮಲಾಪುರದಿಂದ ಎಂ.ಬಿ.ಅಯ್ಯನಹಳ್ಳಿಗೆ ತೆರಳುವಾಗ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.