ಬಳ್ಳಾರಿ: ಮೋಟಾರ್ ಸೈಕಲ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ 3,60,000 ರೂ. ಮೌಲ್ಯದ 6 ಬೈಕ್ ಮತ್ತು 2 ಸ್ಕೂಟಿಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಟ್ಟಿಂಗ್ ಆಡಲು ಬೈಕ್ ಕಳ್ಳತನ, ಬಿಕಾಂ ವಿದ್ಯಾರ್ಥಿ ಬಂಧನ.. - Latest Robbery News In ballari
ಮೋಟಾರ್ ಸೈಕಲ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, 3,60,000 ರೂಪಾಯಿ ಮೌಲ್ಯದ 6 ಬೈಕ್ ಮತ್ತು 2 ಸ್ಕೂಟಿಗಳನ್ನು ವಶಪಡಿಸಿಕೊಂಡಿದ್ದಾರೆ.
ಅವಿನಾಶ್ ಆಚಾರಿ (25 ) ಎಂಬಾತ ಬಂಧಿತ ಆರೋಪಿ. ಬಳ್ಳಾರಿ ನಗರದ ಎಸ್ಜಿಟಿ ಕಾಲೇಜ್ನಲ್ಲಿ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದ ಈತ, ನಗರದ ಕಪ್ಪಗಲ್ಲು ರಸ್ತೆಯಲ್ಲಿ ವಾಸವಾಗಿದ್ದಾನೆ ಎನ್ನಲಾಗಿದೆ.
ಈತ ಬೈಕ್ ಕಳ್ಳತನ ಮಾಡಿ ಬಂದ ಹಣದಲ್ಲಿ ಬೆಟ್ಟಿಂಗ್ ಆಡುತ್ತಿದ್ದ ಎಂದು ಪೊಲೀಸರು ನಡೆಸಿದ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಗಣಿನಾಡು ಬಳ್ಳಾರಿ ಕೌಲ್ ಬಜಾರ್ ಠಾಣೆಯ ಅಪರಾಧ ವಿಭಾಗದ ಪೊಲೀಸ್ ಅಧಿಕಾರಿಗಳು ಡಿಸಿಆರ್ಬಿ ಡಿವೈಎಸ್ಪಿ ಮಹೇಶ್ವರ ಗೌಡ ನೇತೃತ್ವದ ತಂಡ ಕಾರ್ಯಾಚರಣೆ ಮಾಡಿ ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ.ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.