ಬಳ್ಳಾರಿ: ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು ಎಡಿಸಿಗೆ ಮನವಿ ಸಲ್ಲಿಸಿದರು.
ಭತ್ತ ಖರೀದಿ ಕೇಂದ್ರ ಸ್ಥಾಪಿಸುವಂತೆ ಬಿಜೆಪಿ ರೈತ ಮೋರ್ಚಾ ಮನವಿ - ಬಳ್ಳಾರಿ ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರ ಸ್ಥಾಪಿಸುವಂತೆ ಮನವಿ
ಕೂಡಲೇ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರವನ್ನು ಸ್ಥಾಪಿಸಬೇಕು ಮತ್ತು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಬಿಜೆಪಿ ರೈತ ಮೋರ್ಚಾದ ಪದಾಧಿಕಾರಿಗಳು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಗುರುಲಿಂಗನಗೌಡ, ರಾಜ್ಯಾದ್ಯಂತ ಉತ್ತಮ ಮಳೆಯಾದ ಹಿನ್ನೆಲೆ ರೈತರಲ್ಲಿ ಸಂತಸ ಮನೆ ಮಾಡಿದೆ. ಈಗಾಗಲೇ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ಬಹುತೇಕ ರೈತರು ಕಟಾವಿಗೆ ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರವನ್ನು ಸ್ಥಾಪಿಸಬೇಕು ಮತ್ತು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಖರೀದಿ ಕೇಂದ್ರ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಐನಾಥ್ ರೆಡ್ಡಿ ಮಾತನಾಡಿ, ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೂಡಲೇ ಭತ್ತ ಖರೀದಿ ಕೇಂದ್ರವನ್ನು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸ್ಥಾಪಿಸಬೇಕು. ಕೇಂದ್ರ ಸರ್ಕಾರ ಸ್ವಾಮ್ಯದ ಸಿಸಿಐ ಸಂಸ್ಥೆ ಮೊದಲಿನಿಂದಲೂ ಎ ಗ್ರೇಡ್ ಹತ್ತಿಯನ್ನು ಮಾತ್ರ ಖರೀದಿಸುತ್ತಿದ್ದು, ಇದು ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಬಿ ಹಾಗೂ ಸಿ ಗ್ರೇಡ್ ಹತ್ತಿಯನ್ನು ಖರೀದಿಸಲು ಮುಂದಾಗುತ್ತಿಲ್ಲ. ಕೂಡಲೇ ಬಿ ಹಾಗೂ ಸಿ ಗ್ರೇಡ್ ಹತ್ತಿಯನ್ನು ಖರೀದಿಸುವಂತೆ ಸಿಸಿಐ ಸಂಸ್ಥೆಗೆ ಮುಖ್ಯಮಂತ್ರಿಗಳು ನಿರ್ದೇಶಿಸಬೇಕು ಎಂದು ಒತ್ತಾಯಿಸಿದರು.
TAGGED:
BJP farmer Morcha appeals