ಹೊಸಪೇಟೆ:ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರಕ್ಕೆ ಕಾಲಿಡುತ್ತಾರೋ ಅಲ್ಲಿ ಕೈ ಅಭ್ಯರ್ಥಿಗಳ ಸೋಲು ಖಚಿತ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಮಾಜಿ ಸಿಎಂ ಕಾಲೆಳೆದಿದ್ದಾರೆ.
ಸಿದ್ದರಾಮಯ್ಯ ಕಾಲಿಟ್ಟ ಕಡೆ ಕೈ ಅಭ್ಯರ್ಥಿಗೆ ಸೋಲು ಖಚಿತ: ಎನ್.ರವಿಕುಮಾರ್ - ಬಿಜೆಪಿ ರಾಜ್ಯಾಧ್ಯಕ್ಷ ನವೀನ್ ಕುಮಾರ್ ಕಟೀಲ್
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರಕ್ಕೆ ಕಾಲಿಡುತ್ತಾರೋ ಅಲ್ಲಿ ಕೈ ಅಭ್ಯರ್ಥಿಗಳ ಸೋಲು ಖಚಿತ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಟಾಂಗ್ ನೀಡಿದ್ದಾರೆ.
ಬಿಜೆಪಿ ಪಕ್ಷದ ಮಹಿಳಾ ಮೋರ್ಚಾ ಕಾರ್ಯಕ್ರಮವನ್ನು ನಾಳೆ ಬೆಳಗ್ಗೆ 10 ಗಂಟೆಗೆ ಪಟೇಲ್ ನಗರದಲ್ಲಿ ಆಯೋಜಿಸಲಾಗಿದ್ದು, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೃತಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ಪ್ರಚಾರಕ್ಕೆ ಆಗಮಿಸುತ್ತಾರೆ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ಮಾಡಲಾಗುವುದು ಎಂದು ತಿಳಿಸಿದರು.
ಈ ಉಪ ಚುನಾವಣೆಯಲ್ಲಿ ಬಿಜೆಪಿಯ 15 ಅಭ್ಯರ್ಥಿಗಳೂ ಗೆಲ್ಲುತ್ತಾರೆ. ಸಿದ್ದರಾಮಯ್ಯ ಅವರು ಕಾಲಿಟ್ಟ ಸ್ಥಳದಲ್ಲಿ ಕಾಂಗ್ರೆಸ್ ಪಕ್ಷ ಸೋಲುತ್ತದೆ. ವಿಜಯನಗರ ಕ್ಷೇತ್ರದಲ್ಲೂ ಅದೇ ಪರಿಸ್ಥಿತಿ ಎಂದು ಕುಟುಕಿದರು.