ಬಳ್ಳಾರಿ:ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಜೆಡಿಎಸ್ ಜಿಲ್ಲಾಧ್ಯಕ್ಷ ಎನ್.ಟಿ.ಬೊಮ್ಮಣ್ಣ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಸರ್ಕಾರ ತಿದ್ದುಪಡಿ ತಂದಿರುವ ಕಾಯ್ದೆಗಳನ್ನು ಹಿಂಪಡೆಯಬೇಕು: ಎನ್.ಟಿ.ಬೊಮ್ಮಣ್ಣ ಒತ್ತಾಯ - ಜೆಡಿಎಸ್ ಜಿಲ್ಲಾಧ್ಯಕ್ಷ ಎನ್.ಟಿ.ಬೊಮ್ಮಣ್ಣ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಜೆಡಿಎಸ್ ಜಿಲ್ಲಾಧ್ಯಕ್ಷ ಎನ್.ಟಿ.ಬೊಮ್ಮಣ್ಣ ನೇತೃತ್ವದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎನ್.ಟಿ.ಬೊಮ್ಮಣ್ಣ, ಬಿಜೆಪಿ ಸರ್ಕಾರ ಅನೇಕ ತಿದ್ದುಪಡಿಗಳನ್ನು ಮಾಡಿಕೊಂಡು ಬಂದಿದೆ. ಇವುಗಳನ್ನು ರದ್ದುಪಡಿಸಬೇಕೆಂಬ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೆಗೌಡರ ಸಲಹೆ-ಸೂಚನೆಯಂತೆ ಜಿಲ್ಲಾಕಾರಿಗಳಿಗೆ ಮನವಿ ಪತ್ರ ಸಲ್ಲಿಸಲು ಬಂದಿದ್ದೇವೆ. ಬಿಜೆಪಿಯವರು ಒಬ್ಬ ಶಾಸಕನಿಗೆ 30 ರಿಂದ 50 ಕೋಟಿ ಕೊಟ್ಟು ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಿದ್ದು, ಅದನ್ನು ಪ್ರಜಾಪ್ರಭುತ್ವ ಒಪ್ಪುವುದಿಲ್ಲ. ಕೂಡಲೇ ಸರ್ಕಾರ ಜಾರಿಗೆ ತಿದ್ದುಪಡಿ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಯನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದರು.
ನಂತರ ಮಾತನಾಡಿದ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಮೀನಳ್ಳಿ ತಾಯಣ್ಣ, ಭೂ ಸುಧಾರಣೆ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಕೂಡಲೇ ರದ್ದು ಮಾಡಬೇಕು. ಜಿಲ್ಲೆಯಲ್ಲಿನ ರೈತರಿಗೆ ರಸಗೊಬ್ಬರ, ಬೀಜ, ಔಷಧಗಳು ದೊರೆಯುತ್ತಿಲ್ಲ. ಆದ್ದರಿಂದ ಸರ್ಕಾರ ರೈತರಿಗೆ ಕೃಷಿಗೆ ಬೇಕಾದ ವಸ್ತುಗಳನ್ನು ಒದಗಿಸಬೇಕು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು 14 ತಿಂಗಳ ಸಮ್ಮಿಶ್ರ ಸರ್ಕಾರದ ಆಡಳಿತದಲ್ಲಿ ರೈತರ 2 ಲಕ್ಷ ಸಾಲ ಮನ್ನಾ ಮಾಡಿದ್ದಾರೆ. ಬಿಜೆಪಿ ಸರ್ಕಾರ ಕೂಡ ರೈತರ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿದರು.