ಬಳ್ಳಾರಿ: ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನಕ್ಕೆ ಬಳ್ಳಾರಿಯಲ್ಲಿಂದು ಸಚಿವ ಶ್ರೀರಾಮುಲು, ಶಾಸಕ ಸೋಮಶೇಖರ ರೆಡ್ಡಿ ಹಾಗೂ ಸಂಸದ ವೈ.ದೇವೇಂದ್ರಪ್ಪ ಕಂಬನಿ ಮಿಡಿದಿದ್ದಾರೆ.
ಬಳ್ಳಾರಿ ತಾಲೂಕಿನ ಮೋಕಾ ಹೋಬಳಿಯಲ್ಲಿಂದು ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ಅರುಣ್ ಜೇಟ್ಲಿಯವ್ರು ಪಕ್ಷ ಸಂಘಟನೆಗಾಗಿ ಸಾಕಷ್ಟು ದುಡಿದಿದ್ದಾರೆ. ಅವರು ನಮ್ಮೆಲ್ಲರ ಮಾರ್ಗದರ್ಶಕರಾಗಿದ್ದರು. ಸಂಘಟನಾ ಚತುರರಾಗಿದ್ದರು. ಅವರ ಅಗಲಿಕೆ ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಅವಲಂಬಿತ ಕುಟುಂಬಕ್ಕೆ ದುಃಖ ಭರಿಸೋ ಶಕ್ತಿ ನೀಡಲೆಂದು ಆ ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಸಂತಾಪ ಸೂಚಿದರು. ಅಲ್ಲದೆ ನಾನೂ ಕೂಡ ದೆಹಲಿಯತ್ತ ಪ್ರಯಾಣ ಬೆಳೆಸುವೆ ಎಂದು ತಿಳಿಸಿದ್ದಾರೆ.