ಕರ್ನಾಟಕ

karnataka

ETV Bharat / state

ಆನಂದ್​​ ಸಿಂಗ್​​​​ ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ: ಸಚಿವ ಶ್ರೀರಾಮುಲು - Minister Sriramulu Press meet at Bellary

ಆನಂದ್​ ಸಿಂಗ್ ರಾಜೀನಾಮೆ ನೀಡಿದ್ದರಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಅವರನ್ನು ಗೆಲ್ಲಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು.

ಬಳ್ಳಾರಿಯಲ್ಲಿ ಸಚಿವ ಶ್ರೀರಾಮುಲು ಸುದ್ದಿಗೋಷ್ಟಿ ನಡೆಸಿದರು

By

Published : Nov 17, 2019, 1:30 PM IST

ಹೊಸಪೇಟೆ: ಆನಂದ್​ ಸಿಂಗ್ ರಾಜೀನಾಮೆಯಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು.

ಬಳ್ಳಾರಿಯಲ್ಲಿ ಸಚಿವ ಶ್ರೀರಾಮುಲು ಸುದ್ದಿಗೋಷ್ಠಿ

ನಗರದಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಆನಂದ್​ ಸಿಂಗ್ ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಅದರಿಂದ ಬೇಸರಗೊಂಡು ಅವರು ರಾಜೀನಾಮೆ ನೀಡಿದ್ದಾರೆ. ಆನಂದ್​ ಸಿಂಗ್ ರಾಜೀನಾಮೆ ನೀಡಿದ್ದರಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಆದ್ದರಿಂದ ಅವರನ್ನು ಗೆಲ್ಲಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದರು.

ಆನಂದ್​ ಸಿಂಗ್ ಮೂಲತಃ ಬಿಜೆಪಿ ಪಕ್ಷದವರು. ನಾನಾ ಕಾರಣಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದರು. ಈಗ ಮತ್ತೆ ಬಿಜೆಪಿಗೆ ಬಂದಿರುವುದು ನಮಗೆ ಸಂತಸ ತಂದಿದೆ. ಬಿಜೆಪಿ ಪಕ್ಷದ ಕವಿರಾಜ ಅರಸ್ ಬಂಡಾಯವೆದ್ದಿಲ್ಲ. ಅವರನ್ನು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮನವೊಲಿಸುತ್ತಾರೆ ಎಂದು ಹೇಳಿದರು.

ABOUT THE AUTHOR

...view details