ಕರ್ನಾಟಕ

karnataka

ETV Bharat / state

ಪುಟ್ಟೇನಹಳ್ಳಿ ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ: ಆತ್ಮಹತ್ಯೆ ಶಂಕೆ - Puttenahalli lake

ವ್ಯಕ್ತಿಯ ಶವವೊಂದು ಬೆಂಗಳೂರಿನ ಪುಟ್ಟೇನಹಳ್ಳಿ ಕೆರೆಯಲ್ಲಿ ಪತ್ತೆಯಾಗಿದ್ದು, ಬಿಹಾರ ಮೂಲದ ವ್ಯಕ್ತಿ ಎರಡು ದಿನಗಳ ಹಿಂದೆ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಪುಟ್ಟೇನಹಳ್ಳಿ ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ
ಪುಟ್ಟೇನಹಳ್ಳಿ ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ

By

Published : Mar 24, 2021, 3:46 PM IST

ಬೆಂಗಳೂರು:ಜೆ.ಪಿ. ನಗರ ಹತ್ತಿರದ ಪುಟ್ಟೇನಹಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಬಿಹಾರ ಮೂಲದ ವ್ಯಕ್ತಿಯ ಶವ ಎಂದು ಗುರುತಿಸಲಾಗಿದೆ.

ಬಿಹಾರ ಮೂಲದ ವ್ಯಕ್ತಿ ಎರಡು ದಿನಗಳ ಹಿಂದೆ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳಿಂದ ಮೃತದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಶೋಧ ನಡೆಸಿದ್ದರು.

ಓದಿ:ಪ್ರಿಯತಮೆಯಿಂದಲೇ ಪ್ರಿಯಕರನ ಬರ್ಬರ ಕೊಲೆ: ಹಾಡಹಗಲೇ ಬೆಚ್ಚಿಬಿದ್ದ ಬಳ್ಳಾರಿ ಜನ

ವೃತ್ತಿಯಲ್ಲಿ ಪೇಂಟರ್​​ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ, ಪುಟ್ಟೇನಹಳ್ಳಿಯ ಸ್ನೇಹಿತನ ಮನೆಯಲ್ಲಿ ಆಶ್ರಯ ಪಡೆದಿದ್ದ ಎಂದು ತಿಳಿದು ಬಂದಿದೆ. ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತ ವ್ಯಕ್ತಿ ವಿಜಯ್ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 10 ದಿನಗಳ ಹಿಂದೆ ಈತ ಬಿಹಾರದಿಂದ ಬೆಂಗಳೂರಿಗೆ ಬಂದಿದ್ದ ಎನ್ನಲಾಗಿದೆ.

ABOUT THE AUTHOR

...view details