ಕರ್ನಾಟಕ

karnataka

ETV Bharat / state

ವಿಜಯನಗರ ಜಿಲ್ಲೆಗಾಗಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ - ಹೊಸಪೇಟೆ ಲೆಟೆಸ್ಟ್ ನ್ಯೂಸ್

ವಿಜಯನಗರ ಜಿಲ್ಲೆಗಾಗಿ ಸಾಮಾಜಿಕ ಜಾಲತಾಣದಲ್ಲಿ‌ ತಾಲೂಕಿನ ಜನರು ಅಭಿಯಾನವನ್ನು ಆರಂಭಿಸಿದ್ದಾರೆ.

ವಿಜಯನಗರ ಜಿಲ್ಲೆ
Campaign for the Vijayanagara District

By

Published : Feb 12, 2020, 1:40 PM IST

ಹೊಸಪೇಟೆ : ವಿಜಯನಗರ ಜಿಲ್ಲೆಗಾಗಿ ಸಾಮಾಜಿಕ ಜಾಲತಾಣದಲ್ಲಿ‌ ತಾಲೂಕಿನ ಜನರು ಅಭಿಯಾನವನ್ನು ಆರಂಭಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ

ಹಲವು ವರ್ಷಗಳಿಂದ ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಬೇಕೆಂದು ಒತ್ತಾಯಿಸಿ ಅನೇಕ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಅನೇಕರು ಸರ್ಕಾರವನ್ನು ಒತ್ತಾಯಿಸುತ್ತಿದ್ದು, ಉಪಚುನಾವಣೆಯ ನಂತರ ಜಿಲ್ಲೆ ಘೋಷಣೆ ಮಾಡಲಾಗುತ್ತದೆ ಎಂಬ ಭರವಸೆಯನ್ನು ಸರ್ಕಾರ ಹುಸಿಗೊಳಿಸಿದೆ. ಇನ್ನು ಸಚಿವ ಆನಂದ ಸಿಂಗ್ ಉಪ ಚುನಾವಣೆ ಬಳಿಕ ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡುತ್ತಾರೆಂಬ ಆಸೆಯಿಂದ ಆಯ್ಕೆ ಮಾಡಿದ್ದು, ಸಚಿವ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇನ್ನು ಆನಂದ್​ ಸಿಂಗ್ ಅಭಿಮಾನಿಗಳು ಎಂದೇಳಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಬೇಕೆಂಬ ಬೇಡಿಕೆಯನ್ನಿಟ್ಟು ಹೊಸ ಅಭಿಯಾನವನ್ನು ಆರಂಭಿಸಿದ್ದಾರೆ. ವಿಜಯನಗರವನ್ನು ಜಿಲ್ಲೆಯಾಗಿ ಮಾಡದಿದ್ದರೆ ಹೊಸಪೇಟೆಯಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ABOUT THE AUTHOR

...view details