ಕರ್ನಾಟಕ

karnataka

ETV Bharat / state

ಕೂಡ್ಲಿಗಿ ಬಳಿ ಭೀಕರ ಅಪಘಾತ: ಏಳು ಮಂದಿಗೆ ಗಂಭೀರ ಗಾಯ - Car Accident near Kudlagi

ಕಲಬುರಗಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Car Accident
ಕಾರು ಅಪಘಾತ

By

Published : Nov 23, 2020, 7:37 AM IST

ಬಳ್ಳಾರಿ:ಜಿಲ್ಲೆಯ ಕೂಡ್ಲಿಗಿ ಪಟ್ಟಣ‌ದ ರಾಷ್ಟ್ರೀಯ ಹೆದ್ದಾರಿ 50ರ ಗೌಡ್ರು ಪೆಟ್ರೋಲ್ ಬಂಕ್ ಬಳಿ ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಏಳು ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ‌ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲ್ವಾ ಗ್ರಾಮದ ಮಹದೇವಮ್ಮ (52), ಮಲ್ಲಪ್ಪ (40), ಶರಣಪ್ಪ (15), ವೀರೇಶ (17), ಸಾಬಮ್ಮ(19), ಮರಿಯಮ್ಮ (35) ಹಾಗೂ ಕಾರಿನ ಚಾಲಕ ಸಿದ್ದು (22) ತೀವ್ರವಾಗಿ ಗಾಯಗೊಂಡವರು. ಕೂಲಿ ಅರಸಿ ಕಲಬುರಗಿಯಿಂದ ಬೆಂಗಳೂರಿನ ಕಡೆಗೆ ಗುಳೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಹೈವೇ ಪೆಟ್ರೋಲಿಂಗ್ ಹಾಗೂ ಕೂಡ್ಲಿಗಿ ಪೊಲೀಸರು ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾರಿನಲ್ಲಿದ್ದ ಏಳು ಮಂದಿ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ನಾಲ್ವರನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details