ಬಳ್ಳಾರಿ: ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡಾದ ಬಡ ಹುಡುಗಿ ಎಲ್ಚೈತ್ರ ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 541 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ.
ಕೊರೊನಾ ಆತಂಕದ ನಡುವೆ ರಾಜ್ಯ ಸರ್ಕಾರ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಗಿಸಿತ್ತು. ಇಂದು ರಾಜ್ಯದಲ್ಲಿ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಹೊರಬಿದ್ದಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಯಾವುದೇ ಟ್ಯೂಷನ್, ಕೊಚಿಂಗ್ ಇಲ್ಲದೇ ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡಾದ ವಿದ್ಯಾರ್ಥಿನಿ ಎಲ್ಚೈತ್ರ ವಾಣಿಜ್ಯ ವಿಭಾಗದಲ್ಲಿ 541 ಅಂಕಗಳನ್ನು ಪಡೆದು ಫಸ್ಟ್ ಕ್ಲಾಸ್ನಲ್ಲಿ ಉತ್ತೀರ್ಣರಾಗಿದ್ದಾಳೆ.