ಬಳ್ಳಾರಿ:ಲಾಕ್ ಡೌನ್ ಆದೇಶ ಉಲ್ಲಂಘಿಸಿ ಅನಾವಶ್ಯಕವಾಗಿ ತಿರುಗಾಡುತ್ತಿದ್ದ 117 ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಅವರ ಮೇಲೆ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಎಸ್ಪಿ ಸಿ.ಕೆ.ಬಾಬಾ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಸಂತೆ, ಜಾತ್ರೆ ಹಾಗೂ ಜನರು ಗುಂಪು ಸೇರುವಿಕೆಯನ್ನು ಜಿಲ್ಲಾಧಿಕಾರಿಗಳು ನಿಷೇಧಿಸಿದ್ದರೂ ಸಹ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಗೊಲ್ಲರಹಳ್ಳಿಯಲ್ಲಿ ಹತ್ತರಿಂದ ಹದಿನೈದು ಜನ ಕೂಡಿಕೊಂಡು ಕಾಳಿಕಾದೇವಿ ರಥೋತ್ಸವ ಮಾಡಲಾಗಿದೆ.