ಹೊಸಪೇಟೆ:ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿ ಗ್ರಾಮದ ದೊಡ್ಡಕೆರೆಯಲ್ಲಿ ಘಟನೆ ನಡೆದಿದೆ.
ಹೊಸಪೇಟೆ: ಈಜಲು ಹೋಗಿ ಬಾಲಕ ನೀರುಪಾಲು - ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿ ಗ್ರಾಮ
ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಂಡೂರು ತಾಲೂಕಿನ ಬಂಡ್ರಿ ಗ್ರಾಮದಲ್ಲಿ ನಡೆದಿದೆ.

ಈಜಲು ಹೋಗಿ ಬಾಲಕ ನೀರುಪಾಲು
ಅಂಜಿನಪ್ಪ (12) ನೀರುಪಾಲಾದ ಬಾಲಕ. ಕೊರೊನಾ ಹಿನ್ನೆಲೆ ಶಾಲೆಗೆ ರಜೆ ಇದ್ದ ಕಾರಣ ಸ್ನೇಹಿತರೊಂದಿಗೆ ಬಾಲಕ ಈಜಲು ತೆರಳಿದ್ದ ವೇಳೆ ಅವಘಡ ಸಂಭವಿಸಿದೆ. ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ಗರಗ ಗ್ರಾಮದಲ್ಲಿ ಲಾರಿ ಹರಿದು ಪಾದಚಾರಿಯೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ. ಗ್ರಾಮದ ಉಪ್ಪಾರ ಶಿವಪ್ಪ(50) ಮೃತ ವ್ಯಕ್ತಿ. ಈ ಕುರಿತು ಮರಿಯಮ್ಮನಹಳ್ಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.