ಕರ್ನಾಟಕ

karnataka

ETV Bharat / state

ಬಳ್ಳಾರಿ ಪಾಲಿಕೆಯಿಂದ ಭಾರತ್ ಜೋಡೋ ಯಾತ್ರೆ ಬ್ಯಾನರ್ ತೆರವು: ಕಾಂಗ್ರೆಸ್​ ನಾಯಕರ ಆಕ್ರೋಶ

ಬಳ್ಳಾರಿ ನಗರದಲ್ಲಿ ಅನಧಿಕೃತವಾಗಿ ಹಾಕಿದ ಬ್ಯಾನರ್ ತೆರವಿಗೆ ಪಾಲಿಕೆ ಮುಂದಾಗಿದೆ. ಪಾಲಿಕೆಯ ವರ್ತನೆ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

clearance of bharat jodo yatra banner in Bellary
ಬಳ್ಳಾರಿ ಪಾಲಿಕೆಯಿಂದ ಭಾರತ್ ಜೋಡೋ ಯಾತ್ರೆ ಬ್ಯಾನರ್ ತೆರವು

By

Published : Oct 12, 2022, 10:04 AM IST

ಬಳ್ಳಾರಿ:ಮಹಾನಗರ ಪಾಲಿಕೆಯಿಂದ ಯಾವುದೇ ಪರವಾನಿಗೆ ಪಡೆಯದೆ ನಗರದ ಪ್ರಮುಖ ವೃತ್ತ ಮತ್ತು ರಸ್ತೆಗಳ ಇಕ್ಕೆಲಗಳಲ್ಲಿ ಹಾಕಲಾಗಿದ್ದ ಬ್ಯಾನರ್, ಹೋರ್ಡಿಂಗ್ ಹಾಗೂ ಕಟ್​​ಔಟ್​​ಗಳನ್ನು ಪಾಲಿಕೆಯಿಂದ ರಾತ್ರೋರಾತ್ರಿ ಜೆಸಿಬಿ ಬಳಸಿ ತೆರವುಗೊಳಿಸಲಾಯಿತು.

ಬಳ್ಳಾರಿ ನಗರದಲ್ಲಿ ಕಾಂಗ್ರೆಸ್ ಜೋಡೋ ಯಾತ್ರೆ ಹಿನ್ನೆಲೆ ಪರವಾನಗಿ ಇಲ್ಲದೆ ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸಲಾಗಿತ್ತು. ಪಾಲಿಕೆ ಆಯುಕ್ತ ರುದ್ರೇಶ್ ನೇತೃತ್ವದಲ್ಲಿ ಸಂಗಮ್ಮ ಸರ್ಕಲ್​​, ರಾಯಲ್ ಸರ್ಕಲ್ ಸೇರಿದಂತೆ ಹಲವೆಡೆ ಬ್ಯಾನರ್ ತೆರವುಗೊಳಿಸಲಾಯಿತು. ಸಮಾವೇಶ ಹಿನ್ನೆಲೆ ಅತಿ ಹೆಚ್ಚು ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಇದರಿಂದ ಸುಂದರೀಕರಣಕ್ಕೆ ಮಾರಕ ಮತ್ತು ಸಾರ್ವಜನಿಕ ಸಂಚಾರಕ್ಕೆ ಕಿರಿಕಿರಿಯಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದವು.

ಬಳ್ಳಾರಿ ಪಾಲಿಕೆಯಿಂದ ಭಾರತ್ ಜೋಡೋ ಯಾತ್ರೆ ಬ್ಯಾನರ್ ತೆರವು

ಬ್ಯಾನರ್ ತೆರವಿಗೆ ಕಾಂಗ್ರೆಸ್ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೇವಲ ಕಾಂಗ್ರೆಸ್ ಬ್ಯಾನರ್ ತೆರವು, ಬಿಜೆಪಿ ಬ್ಯಾನರ್ ತೆರವು ಏಕಿಲ್ಲ? ಇಂತಹ ರಾಜಕೀಯ ಸರಿಯಿಲ್ಲ. ಬಿಜೆಪಿಯವರು ಪರವಾನಗಿ ಪಡೆದಿದ್ದಾರೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಭಾರತ್ ಜೋಡೋ ಯಾತ್ರೆಗೆ ಸೋನಿಯಾ ಸಾಥ್.. ತಾಯಿಯ ಶ್ಯೂ ಲೇಸ್ ಕಟ್ಟಿದ ಪುತ್ರ.. ಫೋಟೋಗಳಲ್ಲಿ ಜೋಡೋ

ABOUT THE AUTHOR

...view details