ಹೊಸಪೇಟೆ(ವಿಜಯನಗರ): ನಗರದ ತಾಲೂಕು ಕ್ರೀಡಾಂಗಣದಲ್ಲಿ ಅ.2 ಮತ್ತು 3 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯನಗರ ಜಿಲ್ಲೆಗೆ ಕಾರ್ಯಕ್ರಮದ ಮೂಲಕ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗುವುದು ಎಂದು ಸಚಿವ ಆನಂದ್ ಸಿಂಗ್ ತಿಳಿಸಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿಂದು ಆನಂದ್ ಸಿಂಗ್ ಅವರು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಲ್ಯಾಣ ಕರ್ನಾಟಕಕ್ಕೆ ಸೇರಿರುವ ವಿಜಯನಗರ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲಾಗಿದೆ. ಜಿಲ್ಲಾ ವಿಭಜನೆ ಬಳಿಕ 371 ಜೆ ಸೌಲಭ್ಯ ಸಿಗುವುದಿಲ್ಲ ಎಂಬ ಆತಂಕವಿತ್ತು. ಈಗ ಅದು ದೂರವಾಗಿದೆ ಎಂದು ಹೇಳಿದರು.