ಕರ್ನಾಟಕ

karnataka

ETV Bharat / state

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುತ್ತೇವೆ: ಸಿಎಂ ಬಿಎಸ್​ವೈ - ವಿಜಯನಗರ ಕ್ಷೇತ್ರದ ಉಪಚುನಾವಣೆ ಸುದ್ದಿ ಬಳ್ಳಾರಿ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

By

Published : Nov 25, 2019, 3:48 PM IST

ಬಳ್ಳಾರಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ವಿಜಯನಗರ ಕ್ಷೇತ್ರದ ಉಪ ಚುನಾವಣೆ ನಿಮಿತ್ತ ಹೊಸಪೇಟೆಗೆ ಆಗಮಿಸಿ, ಕೊಟ್ಟೂರು ಸ್ವಾಮಿ ಮಠದಲ್ಲಿ ಕೊಟ್ಟೂರೇಶ್ವರರ ಗದ್ದುಗೆ ದರ್ಶನ ಪಡೆದು ಬಳಿಕ ಸಂಗನ ಬಸವ ಸ್ವಾಮೀಜಿಗಳ ಕುಶಲೋಪರಿ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಉಪ ಚುನಾವಣೆಯಲ್ಲಿ 15 ಸ್ಥಾನಗಳನ್ನು ಗೆದ್ದು ತೋರಿಸುತ್ತೀನಿ. ಮುಂದಿನ ಮೂರೂವರೆ ವರ್ಷಗಳ ಕಾಲ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಬಿಎಸ್​ವೈ ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಇನ್ನು ವಿಜಯನಗರ ಕ್ಷೇತ್ರದಲ್ಲಿ ಆನಂದ್​​ ಸಿಂಗ್ ಗೆಲ್ಲುತ್ತಾರೆ ಎಂದರು. ಡಿಸಿಎಂ ಗೋವಿಂದ ಕಾರಜೋಳ, ಬಿಜೆಪಿ ಅಭ್ಯರ್ಥಿ ಆನಂದ್​ ಸಿಂಗ್, ಶಾಸಕ ರಾಜು ಗೌಡ, ಎಂಎಲ್​ಸಿ ರವಿಕುಮಾರ ಉಪಸ್ಥಿತರಿದ್ದರು.

ABOUT THE AUTHOR

...view details