ಹೊಸಪೇಟೆ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಠಾಕೂರ್ ಅವರದ್ದು ಬಿಸಿ ರಕ್ತ ಎಂದು ಹೇಳಿರುವುದು ಅತ್ಯಾಚಾರಿಗಳಿಗೆ ಕುಮ್ಮಕ್ಕು ನೀಡಿದಂತೆ ಎಂದು ಕೆಪಿಸಿಸಿ ವಕ್ತಾರ ಎಲ್.ಎ.ಸಿರಾಜ್ ಶೇಖ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯೋಗಿ ಆದಿತ್ಯನಾಥ್ ಅತ್ಯಾಚಾರಿಗಳನ್ನು ಪ್ರಚೋದಿಸುತ್ತಿದ್ದಾರೆ: ಕಾಂಗ್ರೆಸ್ ವಕ್ತಾರ - Yogi Adityanath
ಉತ್ತರ ಪ್ರದೇಶದ ಹಥ್ರಾಸ್ ಅತ್ಯಾಚಾರ ಪ್ರಕರಣದ ಕುರಿತು ಶೀಘ್ರ ತನಿಖೆ ನಡೆಸಿ ಸಂತ್ರಸ್ಥೆ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಬೇಕು ಎಂದು ಕೆಪಿಸಿಸಿ ವಕ್ತಾರ ಎಲ್.ಎ. ಸಿರಾಜ್ ಶೇಖ್ ಆಗ್ರಹಿಸಿದ್ದಾರೆ.
ಯೋಗಿ ಆದಿತ್ಯನಾಥ್ ಅತ್ಯಾಚಾರಿಗಳಿಗೆ ಪ್ರಚೋದಿಸುತ್ತಿದ್ದಾರೆ ಎಂದ ಕಾಂಗ್ರೆಸ್ ವಕ್ತಾರ
ನಗರದ ಕಾಂಗ್ರೆಸ್ ಕಚೇರಿಯಲ್ಲಿಂದು ಮಾತನಾಡಿದ ಅವರು, ಮುಖ್ಯಮಂತ್ರಿ ಈ ರೀತಿ ಮಾತನಾಡಿದರೆ ಹೇಗೆ?. ಇದು ಪ್ರಜಾಪ್ರಭುತ್ವದ ವ್ಯವಸ್ಥೆ ಎಂಬುದನ್ನು ಹೇಳಬೇಕಾಗುತ್ತದೆ. ಕಾನೂನು ಪ್ರಕಾರ ಶಿಕ್ಷೆ ನೀಡಲು ಪ್ರಧಾನಿಯ ಆದೇಶ ಬೇಕೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ಈ ಘಟನೆ ಕುರಿತು ಬಿಜೆಪಿ ಮಹಿಳಾ ಮುಖಂಡರು, ಮಹಿಳಾ ಆಯೋಗದ ಅಧ್ಯಕ್ಷೆ ಮಾತನಾಡುತ್ತಿಲ್ಲ. ದಲಿತ ಮಹಿಳೆಗೆ ರಕ್ಷಣೆ ಇಲ್ಲದಂತಾಗಿದೆ. ಯೋಗಿ ಸರ್ಕಾರವನ್ನು ರಾಷ್ಟ್ರಪತಿಗಳು ವಜಾ ಮಾಡಬೇಕು. ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.