ಕರ್ನಾಟಕ

karnataka

ETV Bharat / state

ಜಿಲ್ಲಾದ್ಯಂತ ಮಾದರಿ ನೀತಿ ಸಂಹಿತೆ ಜಾರಿ: ವಿಜಯನಗರ ಕ್ಷೇತ್ರದಲ್ಲೇ ಮತಪೆಟ್ಟಿಗೆ ತಯಾರಿಕೆಗೆ ಜಿಲ್ಲಾಡಳಿತ ಚಿಂತನೆ!

ಚುನಾವಣಾ ಆಯೋಗ ಉಪಚುನಾವಣೆಯನ್ನು ದಿನಾಂಕವನ್ನು ಘೋಷಣೆ ಮಾಡಿದ್ದ ಹಿನ್ನಲೆಯಲ್ಲಿ ಜಿಲ್ಲೆಯ ವಿಜಯನಗರ ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತೆಯನ್ನು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ಚುನಾವಣೆಗೆ ಬೇಕಾದ ಸಿದ್ಧತೆಗಳ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

Bellary district

By

Published : Sep 22, 2019, 3:02 PM IST

ಬಳ್ಳಾರಿ : ವಿಜಯನಗರ ಕ್ಷೇತ್ರದ ಉಪಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ಮಾದರಿ ನೀತಿ ಸಂಹಿತೆಯನ್ನು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿ

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕೇವಲ ವಿಜಯನಗರ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವುದರಿಂದ ಡಿಎಂಎಫ್ ಹಾಗೂ ಹೆಚ್​ಕೆಡಿಬಿಆರ್ ಅಡಿಯಲ್ಲಿನ ಅಭಿವೃದ್ಧಿ ಕಾರ್ಯಗಳು ಸೆ.30ರವರೆಗೆ ನಡೆಸಲು ಈಗಾಗಲೇ ಸೂಚನೆ ನೀಡಲಾಗಿದೆ. ಈ ಬಗ್ಗೆ ಗೊಂದಲವಿದ್ದು, ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ. ವಿಜಯನಗರ ಕ್ಷೇತ್ರವನ್ನು ಬಿಟ್ಟು ಉಳಿದ ತಾಲೂಕುಗಳಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಬೇಕಾ, ಬೇಡವ ಎಂಬುದರ ಬಗ್ಗೆ ಆಯೋಗದಿಂದ ಸ್ಪಷ್ಟನೆ ದೊರೆಯಬೇಕಿದೆ. ಹಾಗಾಗಿ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಲು ಸೆ.30 ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದರು.

ಮತ ಪೆಟ್ಟಿಗೆಗಳನ್ನು ಹೊರರಾಜ್ಯ ತಮಿಳುನಾಡಿನಿಂದ ಹಾವೇರಿಗೆ, ಹಾವೇರಿಯಿಂದ ಬಳ್ಳಾರಿಗೆ ತಂದು ಹೊಸಪೇಟೆಗೆ ಕೊಂಡ್ಯೊಯಲು ಕಷ್ಟಕರವಾಗಲಿದ್ದು, ವಿಜಯನಗರ ಕ್ಷೇತ್ರದಲ್ಲೇ ಈ ಮತಪೆಟ್ಟಿಗೆ ತಯಾರಿಕೆಗೆ ನಿರ್ಧರಿಸಲಾಗಿದೆ.ಜಿಲ್ಲೆಯ ವಿಜಯನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು 247 ಮತಗಟ್ಟೆಗಳು ಬರಲಿದ್ದು, ಹೊಸಪೇಟೆ ನಗರ ಪ್ರದೇಶದಲ್ಲಿ 184 ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 63 ಮತಗಟ್ಟೆಗಳಿವೆ. ಸುಮಾರು 1,15,691 ಪುರುಷರು, 1,20,400 ಮಹಿಳೆಯರು ಮತ್ತು 63 ತೃತೀಯ ಲಿಂಗಿಗಳು ಸೇರಿದಂತೆ ಒಟ್ಟಾರೆಯಾಗಿ 2,36,154 ಮತದಾರರನ್ನು ವಿಜಯನಗರ ಕ್ಷೇತ್ರವು ಹೊಂದಿದೆ. 105 ಪುರುಷರು, ಮೂವರು ಮಹಿಳೆಯರು ಸೇರಿದಂತೆ ಒಟ್ಟು 108 ಪೋಸ್ಟಲ್ ಬ್ಯಾಲೆಟ್ ಮತಗಳಿವೆ ಎಂದರು.

ಎಂಸಿಸಿ ತಂಡ ರಚನೆ:
ಉಪಚುನಾವಣೆಯಲ್ಲಿನ‌ ಅಕ್ರಮ ತಡೆಯುವ ಸಲುವಾಗಿ ಎಂಸಿಸಿ ತಂಡ ರಚನೆ ಮಾಡಲಾಗಿದ್ದು, ಕ್ಷೇತ್ರದಲ್ಲಿ ಸ್ಪರ್ಧೆ ಬಯಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸೆ.30ರಂದು ಕೊನೆಯ ದಿನ ಆಗಿದೆ. ಅ.01ರಂದು‌ ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ.ಅ. 3ರಂದು ನಾಮಪತ್ರ ಹಿಂಪಡೆಯಬಹುದಾಗಿದೆ. ಅ. 21ರಂದು ಮತದಾನ ನಡೆಯಲಿದ್ದು, ಅ.24ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಇನ್ನು ಅ.27ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಮತ ಎಣಿಕೆ ಕಾರ್ಯವನ್ನು ಬಳ್ಳಾರಿ ಅಥವಾ ಹೊಸಪೇಟೆಯಲ್ಲಿ ನಡೆಸಬೇಕೆಂಬುದರ ಬಗ್ಗೆ ಚುನಾವಣಾ ಆಯೋಗ ಪರವಾನಗಿ ಪಡೆಯಬೇಕಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಮಾತನಾಡಿ, ವಿಜಯನಗರ ಕ್ಷೇತ್ರವ್ಯಾಪ್ತಿಯಲ್ಲಿ ಸರಿ ಸುಮಾರು ಆರೇಳು ಚೆಕ್ ಪೋಸ್ಟ್​ಗಳನ್ನು ಆರಂಭಿಸಲಾಗುವುದು. ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ಈ ಚುನಾವಣಾ ಕಾರ್ಯಕ್ಕೆ ನಿಯೋಜಿಸಿ ಸೂಕ್ತ ಬಂದೋಬಸ್ತ್ ಮಾಡಲಾಗುವುದು. ಎಂಸಿಸಿ ತಂಡದ ಸೂಚನೆಯ ಮೇರೆಗೆ ಜಿಲ್ಲಾ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸಲಿದೆ. ಅಗತ್ಯಬಿದ್ದರೆ ಗಡಿಭಾಗದಲ್ಲಿ ಹೆಚ್ಚುವರಿ ಚೆಕ್ ಪೋಸ್ಟ್ ನಿರ್ಮಿಸಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ ಎಂದರು.

ABOUT THE AUTHOR

...view details