ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನೇತೃತ್ವದಲ್ಲಿ ಸರ್ಕಾರ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ದೊರೆತಿದೆ.
ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಪ್ರಾರಂಭ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನೇತೃತ್ವದಲ್ಲಿ ಸರ್ಕಾರ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಭಾನುವಾರ ಚಾಲನೆ ದೊರೆಯಿತು.
commencement-of-a-two-day-government-employees-district-level-games
ಶಾಸಕ ಜಿ.ಸೋಮಶೇಖರ್ ರೆಡ್ಡಿ ಸಸಿಗೆ ನೀರು ಹಾಕುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮನುಷ್ಯನಿಗೆ ಜೀವನದಲ್ಲಿ ಹಣಕ್ಕಿಂತ ಆರೋಗ್ಯ ಬಹಳ ಮುಖ್ಯ. ಆರೋಗ್ಯವಾಗಿ ಇರಬೇಕಾದ್ರೆ ವ್ಯಾಯಾಮ, ಯೋಗ ಮತ್ತು ಇನ್ನಿತರ ಕ್ರೀಡೆಗಳಲ್ಲಿ ಪ್ರತಿನಿತ್ಯ ತೊಡಗಿಸಿಕೊಳ್ಳಬೇಕು ಎಂದರು.
ನಂತರ ಕ್ರೀಡಾಂಗಣದಲ್ಲಿ ಓಟ, ಕಬ್ಬಡಿ, ವಾಲಿಬಾಲ್, ಫುಟ್ಬಾಲ್, ಈಜು, ಕ್ರಿಕೆಟ್, ಎತ್ತರ ಜಿಗಿತ, ಉದ್ದ ಜಿಗಿತ, ಗುಂಡು ಎಸೆತ, ಚೆಸ್, ಕುಸ್ತಿ ಇನ್ನಿತರ ಕ್ರೀಡೆಗಳು ನಡೆದವು.