ಬಳ್ಳಾರಿ: ವೃತ್ತಿಪರ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಗುರುವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯು ಅತ್ಯಂತ ಸೂಸೂತ್ರವಾಗಿ ನಡೆಯಿತು.
ಸಾಮಾನ್ಯ ಪ್ರವೇಶ ಪರೀಕ್ಷೆ ಯಾವುದೇ ರೀತಿಯ ಸಮಸ್ಯೆ ಇಲ್ಲದೇ ನಡೆದವು: ಉಪನಿರ್ದೇಶಕ ನಾಗರಾಜ್ - ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗರಾಜ್
ಬಳ್ಳಾರಿ ಜಿಲ್ಲೆಯಲ್ಲಿ 18 ಪರೀಕ್ಷಾ ಕೇಂದ್ರಗಳಲ್ಲಿ ವೃತ್ತಿಪರ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಇಂದು ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯು ಯಾವುದೇ ರೀತಿಯ ಸಮಸ್ಯೆ ಇಲ್ಲದೇ ನಡೆದವು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 18 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಯಾವುದೇ ರೀತಿಯ ಸಮಸ್ಯೆ ಇಲ್ಲದೇ ನಡೆದವು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ. ಗುರುವಾರ ಬೆಳಗ್ಗೆ 10 ರಿಂದ 11:50ರವರೆಗೆ ನಡೆದ ಜೀವಶಾಸ್ತ್ರ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 7,528 ವಿದ್ಯಾರ್ಥಿಗಳಲ್ಲಿ 6,128 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 1,400ಜನ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಮಧ್ಯಾಹ್ನ 2:30 ರಿಂದ 3:50ರವರೆಗೆ ನಡೆದ ಗಣಿತ ಪರೀಕ್ಷೆಯಲ್ಲಿ 6,880 ಹಾಜರಾಗಿದ್ದರು. 648 ಜನ ಗೈರು ಹಾಜರಾಗಿದ್ದರು. ಜೀವಶಾಸ್ತ್ರ ಪರೀಕ್ಷೆಗೆ ಕ್ವಾರಂಟೈನ್ನಲ್ಲಿದ್ದ 3 ವಿದ್ಯಾರ್ಥಿಗಳು ಮತ್ತು ಕೋವಿಡ್ ಸೋಂಕಿತ 5 ವಿದ್ಯಾರ್ಥಿಗಳು ಹಾಗೂ ಮಧ್ಯಾಹ್ನ ನಡೆದ ಗಣಿತ ಪರೀಕ್ಷೆಗೆ ಕ್ವಾರಂಟೈನ್ನಲ್ಲಿದ್ದ 4 ವಿದ್ಯಾರ್ಥಿಗಳು ಮತ್ತು ಕೋವಿಡ್ ಸೋಂಕಿತ 6 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.