ಬಳ್ಳಾರಿ: ವಿಜಯನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ - ಬಿಜೆಪಿ ಅಭ್ಯರ್ಥಿಗಳು ಒಂದೇ ದಿನ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ. ನಾಳೆ ಉಭಯ ಅಭ್ಯರ್ಥಿಗಳು ಒಂದೊಂದು ಗಂಟೆಯ ಅಂತರದಲ್ಲೇ ನಾಮಪತ್ರ ಸಲ್ಲಿಕೆಗೆ ಮುಂದಾಗಿದ್ದಾರೆ.
ಬಳ್ಳಾರಿ ಉಪ ಚುನಾವಣೆ: ನಾಳೆ ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ - Bellary by election news
ವಿಜಯನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ - ಬಿಜೆಪಿ ಅಭ್ಯರ್ಥಿಗಳು ನಾಳೆ ಒಂದೊಂದು ಗಂಟೆಯ ಅಂತರದಲ್ಲೇ ನಾಮಪತ್ರ ಸಲ್ಲಿಸಲಿದ್ದಾರೆ.
![ಬಳ್ಳಾರಿ ಉಪ ಚುನಾವಣೆ: ನಾಳೆ ಕಾಂಗ್ರೆಸ್-ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ](https://etvbharatimages.akamaized.net/etvbharat/prod-images/768-512-5094551-thumbnail-3x2-net.jpg)
ಹೊಸಪೇಟೆ ನಗರದ ವಾಲ್ಮೀಕಿ ವೃತ್ತದಿಂದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಾವ್ ಘೋರ್ಪಡೆ ಬೆಳಿಗ್ಗೆ 11.30 ಗಂಟೆಯ ಬಳಿಕ ಪಾದಯಾತ್ರೆಯ ಮೂಲಕ ಮೆರವಣಿಗೆ ಶುರು ಮಾಡಿ, ಹೊಸಪೇಟೆ ಸಹಾಯಕ ಆಯುಕ್ತರ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ಸಮಿತಿ (ಗ್ರಾಮಾಂತರ) ಅಧ್ಯಕ್ಷ ಬಿ.ವಿ.ಶಿವ ಯೋಗಿ, ಶಾಸಕರಾದ ಈ.ತುಕಾರಾಂ, ಪಿ.ಟಿ.ಪರಮೇಶ್ವರನಾಯ್ಕ, ಭೀಮಾನಾಯ್ಕ ಸೇರಿದಂತೆ ಇನ್ನಿತರೆ ಕಾಂಗ್ರೆಸ್ ಮುಖಂಡರು ಪಾದಯಾತ್ರೆ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಅನರ್ಹ ಶಾಸಕ ಆನಂದ್ ಸಿಂಗ್ ಅವರು ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10:30 ಗಂಟೆಗೆ ನಗರದ ಆರಾಧ್ಯದೈವ ವಡಕರಾಯ ದೇಗುಲದಿಂದ ಪಾದಯಾತ್ರೆ ಶುರು ಮಾಡಿ, ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಚನ್ನಬಸವನಗೌಡ ಪಾಟೀಲ, ಮಂಡಲ ಅಧ್ಯಕ್ಷ ಕೆ.ಅನಂತ ಪದ್ಮನಾಭ, ಮಾಧ್ಯಮ ಸಂಚಾಲಕ ಶಂಕರ ಮೇಟಿ, ಆರೋಗ್ಯ ಸಚಿವ ಬಿ.ಶ್ರೀರಾಮುಲು, ಡಿಸಿಎಂ ಗೋವಿಂದ ಕಾರಜೋಳ, ಎಂಎಲ್ ಸಿ ಎನ್.ರವಿಕುಮಾರ ಅವರಿಗೆ ಸಾಥ್ ನೀಡಲಿದ್ದಾರೆ.