ಬಳ್ಳಾರಿ: ಕಂಪ್ಲಿ ಕಾಂಗ್ರೆಸ್ ಶಾಸಕ ಜೆ.ಎನ್.ಗಣೇಶ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪಟ್ಟಣದ ಉದ್ಭವ ಗಣೇಶ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಅಂಬೇಡ್ಕರ್ ವೃತ್ತದವರೆಗೆ ಸಾಗಿ ಬಂತು. ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ನಿಂದ ಪ್ರತಿಭಟನೆ ಈ ವೇಳೆ ಶಾಸಕ ಜೆ.ಎನ್.ಗಣೇಶ್ ಮಾತನಾಡಿ, ಪೆಟ್ರೋಲ್ ಬೆಲೆ ಲೀಟರ್ಗೆ 100 ರೂಪಾಯಿ ಆಗಿದೆ. ಕಾಂಗ್ರೆಸ್ ಸರ್ಕಾರ ಸಾಲ ಮಾಡಿದ್ದನ್ನು ತೋರಿಸುವೆ ಎಂದು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ, ಸಾಕಷ್ಟು ಸಾಲ ಮಾಡಿದೆ. ಆದರೆ, ಸರ್ಕಾರ ಇದ್ಯಾವುದರ ಬಗ್ಗೆ ತಲೆ ಕೆಡಿಸಿಕೊಳ್ಳದೆ ಮೌನವಾಗಿದೆ. ಅಂದು ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಗ್ಯಾಸ್ ಬೆಲೆ 350 ರೂಪಾಯಿ ಇತ್ತು. ಒಂದೆರಡು ರೂಪಾಯಿ ಹೆಚ್ಚಾದರೆ ಬಿಜೆಪಿ ಪ್ರತಿಭಟನೆ ಮಾಡುತ್ತಿತ್ತು. ಇಂದು ಗ್ಯಾಸ್, ಪೆಟ್ರೋಲ್ ಬೆಲೆ 100 ರೂಪಾಯಿ ಹೆಚ್ಚಾದರೂ ಬಿಜೆಪಿಯವರು ಸುಮ್ಮನೆ ಇದ್ದಾರೆ ಎಂದರು.
ಓದಿ : ಗೋಕಾಕ್: ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ನಿಂದ ಬೃಹತ್ ಪ್ರತಿಭಟನೆ
ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಟಗಿ ಬಸವರಾಜಗೌಡ, ಕುರುಗೋಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಂಗಿಮಲ್ಲಯ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ಶಶಿ, ತಾ.ಪಂ ಸದಸ್ಯ ಷಣ್ಮುಕಪ್ಪ, ಪುರಸಭೆ ಸದಸ್ಯರಾದ ಬಿ.ಪ್ರಸಾದ್, ಕೆ.ಎಸ್. ಚಾಂದ್ ಭಾಷ, ಉಸ್ಮಾನ್ ಹೊನ್ನುರವಲಿ, ಮೌಲಾ, ವಿರಾಂಜನೇಯಲು, ಮುಖಂಡರಾದ ಕಲ್ಲುಕಂಭ ಪಂಪಾಪತಿ, ಹಬೀಬ್ ರೆಹಮಾನ್, ಜಾಫರ್, ಅಕ್ಕಿ ಜಿಲಾನಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.