ಕರ್ನಾಟಕ

karnataka

ETV Bharat / state

ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ: ಸಾಮಾಜಿಕ ಅಂತರ ಮರೆತ 'ಕೈ'​ ಕಾರ್ಯಕರ್ತರು - congress protest news

ಕಾಂಗ್ರೆಸ್ ಸರ್ಕಾರ ಇದ್ದಾಗ ಪೆಟ್ರೋಲ್, ಡೀಸೆಲ್​​ ಮೇಲೆ ಕೇಂದ್ರದ ಸುಂಕ 9 ರೂಪಾಯಿ ಇತ್ತು. ಇಂದು 36 ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಜನಸಾಮನ್ಯರ ಮೇಲೆ ಹೊರೆ ಹೆಚ್ಚಿಸಲಾಗಿದೆ ಎಂದು ಕಾಂಗ್ರೆಸ್​ ಕಾರ್ಯಕರ್ತರು ಆರೋಪಿಸಿದರು.

congress-workers-protest
ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

By

Published : Jun 29, 2020, 6:20 PM IST

ಬಳ್ಳಾರಿ‌:ತೈಲ ಬೆಲೆ ಏರಿಕೆ ಖಂಡಿಸಿ ನಗರದ ರಾಯಲ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೇಸ್ ಪಕ್ಷದ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಈ‌ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್​ ಜಿಲ್ಲಾ ಅಧ್ಯಕ್ಷ ಮಹಮ್ಮದ್ ರಫೀಕ್, ಕಾಂಗ್ರೆಸ್ ಸರ್ಕಾರ ಇದ್ದಾಗ ಪೆಟ್ರೋಲ್, ಡೀಸೆಲ್​ ಮೇಲೆ ಕೇಂದ್ರದ ಸುಂಕ 9 ರೂಪಾಯಿ ಇತ್ತು. ಈಗ 36 ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಜನಸಾಮನ್ಯರ ಮೇಲೆ ಹೊರೆ ಹೆಚ್ಚಿಸಲಾಗಿದೆ ಎಂದು ಆರೋಪಿಸಿದರು.

ಪ್ರಸ್ತುತ ಡಾಲರ್, ಪೆಟ್ರೋಲ್, ಡೀಸೆಲ್ ಬೆಲೆಗಳು 75 ರೂಪಾಯಿಗಿಂತ ಅಧಿಕವಾಗಿದೆ. ಇದಕ್ಕೆ ಕಾರಣ ಕೇಂದ್ರದ ಬಿಜೆಪಿ ಸರ್ಕಾರ ಎಂದು ದೂರಿದರು. ಜನರು ಕೆಲಸವಿಲ್ಲದೆ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರ ತೈಲ ಬೆಲೆ ಏರಿಕೆ ಮೂಲಕ ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ ಎಂದರು.

ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಅಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಿಲಿಂಡರ್ ಹಿಡಿದುಕೊಂಡು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇಂದು ಗ್ಯಾಸ್​ ಬೆಲೆ 900 ರೂ. ದಾಟಿದೆ. ಆದರೂ ಅವರು ಕಾಣಿಸುತ್ತಿಲ್ಲ ಎಂದು ಆಕ್ರೋಶ ಹೊರ ಹಾಕಿದರು.

ನಗರದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿದ್ದರೂ ಪ್ರತಿಭಟನಾನಿರತ ಕಾಂಗ್ರೆಸ್​​ ಕಾರ್ಯಕರ್ತರು ಸಾಮಾಜಿಕ ಅಂತರ ಪಾಲಿಸದೆ ಸರ್ಕಾರದ ನಿಯಮಗಳನ್ನು ಗಾಳಿಗೆ ತೋರಿದ್ದು ಕಂಡು ಬಂತು.

ABOUT THE AUTHOR

...view details