ವಿಜಯನಗರ: ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ ಇದೀಗ ಏಳಕ್ಕೆ ಏರಿಕೆಯಾಗಿದ್ದು, ಜನರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.
ಸೆ.23 ರಂದು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದ ನಾಗಮ್ಮ ದೊಡ್ಡಬಾರಿಕೇರ (72) ಇಂದು ಮೃತಪಟ್ಟಿದ್ದಾರೆ. ಅಸ್ವಸ್ಥರಾಗಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಕಳೆದೆರಡು ದಿನಗಳಿಂದ ಮತ್ತೆ ಅನಾರೋಗ್ಯಕ್ಕೀಡಾಗಿ, ಮಕರಬ್ಬಿಯ ತಾತ್ಕಾಲಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಗೆ ಕೊಂಡೊಯ್ಯುವಾಗ ಕಾಂತೆಬೆನ್ನೂರು ಬಳಿ ಮೃತಪಟ್ಟಿದ್ದಾರೆ.