ಬಳ್ಳಾರಿ: ಮಹಾಮಾರಿ ಕೋವಿಡ್ ಸಂಕಷ್ಟದಲ್ಲಿ ನಾವಿದ್ದೇವೆ. ಸೂಕ್ತ ಮಾರ್ಗೋಪಾಯ ಕಂಡುಕೊಳ್ಳೋ ಬದಲಿಗೆ ಈ ರಾಜಕೀಯ ಮೇಲಾಟ ಸರಿಯಲ್ಲ. ಅಧಿಕಾರ ಮತ್ತು ಕುರ್ಚಿಗಾಗಿ ಕಿತ್ತಾಟ ನಡೆಸೋದು ಸದ್ಯದ ಪರಿಸ್ಥಿತಿಯಲ್ಲಿ ಸಲ್ಲದು ಎಂದು ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದ ಮಿಲ್ಲರ್ ಪೇಟೆಯಲ್ಲಿರುವ ಕಲ್ಯಾಣ ಸ್ವಾಮಿ ಮಠದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂಕಷ್ಟದಲ್ಲಿ ರಾಜ್ಯದ ಜನರಿದ್ದಾರೆ. ಇಂತಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಕೂಗು ಎದ್ದಿರೋದು ಸರಿಯಲ್ಲ ಎಂದರು.