ಬಳ್ಳಾರಿ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ಆಗ್ರಹಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು ತಮ್ಮ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಒತ್ತಾಯಿಸಿ ಗುತ್ತಿಗೆ ನೌಕರರ ಪ್ರತಿಭಟನೆ
ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೂ ಸಹ ಖಾಯಂ ನೌಕರರಿಗೆ ನೀಡುವಂತೆ ವೇತನ ನೀಡುವ ಜೊತೆಗೆ ಇತರ ಸೌಲಭ್ಯಗಳನ್ನು ಒದಗಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಖಾಯಂ ನೌಕರರಿಗೆ ಉತ್ತಮ ವೇತನ ನೀಡಲಾಗುತ್ತಿದೆ. ಆದರೆ ಗುತ್ತಿಗೆ, ಹೊರ ಗುತ್ತಿಗೆ ನೌಕರರಿಗೆ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಎಲ್ಲಾ ಹುದ್ದೆಗಳಿಗೆ ವೇತನ, ಭತ್ಯೆ ಹಾಗೂ ವೇತನ ಶ್ರೇಣಿಯನ್ನು ನೀಡಬೇಕು ಎಂದು ಬಳ್ಳಾರಿ ನಗರದ ಜಿಲ್ಲಾಸ್ಪತ್ರೆಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟಿಸಿದ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು, ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ತಮ್ಮ ಅಗತ್ಯತೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಸೇವಾನುಭವಕ್ಕೆ ತಕ್ಕಂತೆ ಸೇವಾಂಕವನ್ನು ನೀಡಬೇಕು. ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರನ್ನು ಸೇವೆಯಿಂದ ಕೈಬಿಡಬಾರದು. ಕ್ಷುಲ್ಲಕ ನೆಪಗಳನ್ನೊಡ್ಡಿ ಕೆಲಸದಿಂದ ತೆಗೆಯಬಾರದು. ರಜೆ ದಿನಗಳಲ್ಲಿ ಕಾರ್ಯನಿರ್ವಹಿಸಿದರೆ ಪರ್ಯಾಯ ವೇತನ ಹಾಗೂ ರಜೆಯನ್ನು ನೀಡಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.