ಬಳ್ಳಾರಿ: ಗಣಿನಾಡಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಸಾವಿರದ ಗಡಿದಾಟಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಲು ವರ್ತಕರು ತೀರ್ಮಾನಿಸಿದ್ದಾರೆ.
ಅಂಗಡಿ ಮುಂಗಟ್ಟು ಬಂದ್ ಮಾಡಲು ಬಳ್ಳಾರಿ ವರ್ತಕರ ಸ್ವಯಂ ತೀರ್ಮಾನ - ಬಳ್ಳಾರಿ ವರ್ತಕ
ಬಳ್ಳಾರಿಯಲ್ಲಿ ಇಂದಿನಿಂದ ಸ್ವಯಂ ಪ್ರೇರಿತವಾಗಿ ಲಾಕ್ಡೌನ್ ಮಾಡಲು ವರ್ತಕರ ಸಂಘ ತೀರ್ಮಾನಿಸಿದೆ.
ಬಳ್ಳಾರಿ ಚೇಂಬರ್ ಆಫ್ ಕಾಮರ್ಸ್ ಆದೇಶ
ಜುಲೈ 3ರಿಂದ 11ರವರೆಗೆ ಈ ನಿಯಮ ಪಾಲನೆಗೆ ನಿರ್ಧಾರ ಮಾಡಲಾಗಿದೆ. ನಗರದಲ್ಲಿ ದಿನೇ ದಿನೆ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕದ ವಾತಾವರಣ ಮನೆ ಮಾಡಿದೆ.
ಮಧ್ಯಾಹ್ನ 3 ಗಂಟೆವರೆಗೆ ವ್ಯಾಪಾರ ವಹಿವಾಟು ನಡೆಸುವುದಾಗಿ ಬಳ್ಳಾರಿ ಚೇಂಬರ್ ಆಫ್ ಕಾಮರ್ಸ್ ಆದೇಶ ಹೊರಡಿಸಿದೆ. ಸದ್ಯ ಈ ನಿರ್ಧಾರಕ್ಕೆ ಜನ ಸಾಮಾನ್ಯರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.