ಕರ್ನಾಟಕ

karnataka

ETV Bharat / state

ಬಳ್ಳಾರಿಯಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗೆ ಕೊರೊನಾ - Bellary

ಜೂ. 25ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಬಳ್ಳಾರಿ ತಾಲೂಕಿನ ಕಪ್ಪಗಲ್ಲು ಗ್ರಾಮಕ್ಕೆ ಬೈಕ್​ನಲ್ಲಿ ಇಬ್ಬರು ವಿದ್ಯಾರ್ಥಿಗಳು ವಾಪಸ್ಸಾಗುವಾಗ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಬ್ಬರ ಪೈಕಿ ಓರ್ವನಿಗೆ ಸೋಂಕು ದೃಢಪಟ್ಟಿದೆ.

Bellary
ಬಳ್ಳಾರಿಯಲ್ಲಿ ಓರ್ವ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗೆ ಕೊರೊನಾ

By

Published : Jun 28, 2020, 9:56 AM IST

ಬಳ್ಳಾರಿ:ಜಿಲ್ಲೆಯಲ್ಲಿ ಓರ್ವ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಮೂವರು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಸೋಂಕು ತಗುಲಿದಂತಾಗಿದೆ.

ಜೂ. 25ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಬಳ್ಳಾರಿ ತಾಲೂಕಿನ ಕಪ್ಪಗಲ್ಲು ಗ್ರಾಮಕ್ಕೆ ಬೈಕ್​ನಲ್ಲಿ ಇಬ್ಬರು ವಿದ್ಯಾರ್ಥಿಗಳು ಹಿಂತಿರುಗುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಬ್ಬರ ಪೈಕಿ ಓರ್ವನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಹಿಂದೆ ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದ್ದರಿಂದ ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ.‌ ಅವರಿಬ್ಬರೂ ಕೂಡ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮುಂದಿನ ಬಾರಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದೆಂದು ಡಿಡಿಪಿಐ ಸಿ.ರಾಮಪ್ಪ ತಿಳಿಸಿದ್ದಾರೆ.

ABOUT THE AUTHOR

...view details