ಕರ್ನಾಟಕ

karnataka

ETV Bharat / state

ವೃತ್ತಿಪರ ಕೋರ್ಸ್​​ಗಳ ದಾಖಲಾತಿ: ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳೇ ಮುಂದು

ಕೋವಿಡ್-19 ಎಫೆಕ್ಟ್​ನಿಂದಾಗಿ ಸ್ಥಳೀಯ ಕಾಲೇಜುಗಳಲ್ಲಿ ವೃತ್ತಿಪರ ಕೋರ್ಸ್​​ಗಳ ದಾಖಲಾತಿಗೆ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳೇ ಹೆಚ್ಚಿನ ಒಲವು ತೋರುತ್ತಿದ್ದಾರೆ.

Corona Impact on admissions in professional courses
ರಾವ್​​ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯ

By

Published : Dec 14, 2020, 9:52 PM IST

ಬಳ್ಳಾರಿ:ರಾವ್​​ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರವೇಶಾತಿ ಪ್ರಕ್ರಿಯೆಗೆ ಸಾಂಕೇತಿಕವಾಗಿ ಚಾಲನೆ ದೊರೆತಿದ್ದು, ಇಂಜಿನಿಯರಿಂಗ್ ಕೋರ್ಸ್​​ಗಳಿಗೆ ಪ್ರವೇಶ ಪಡೆಯಲು ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳೇ ಹೆಚ್ಚಿನ ಆಸಕ್ತಿ ತೋರಿದ್ದಾರೆ. ಅದಕ್ಕೆಲ್ಲಾ ಕಾರಣ ಕೊರೊನಾ.

ಕಳೆದ ವರ್ಷದ ಶೈಕ್ಷಣಿಕ ಸಾಲಿನಲ್ಲಿ ರಾಜಧಾನಿ ಬೆಂಗಳೂರು, ಚಿತ್ರದುರ್ಗ, ಮೈಸೂರು, ತುಮಕೂರು ಮತ್ತು ಹುಬ್ಬಳ್ಳಿಯಿಂದಲೂ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಲು ಒಲವು ತೋರುತ್ತಿದ್ದರು. ಕೊರೊನಾ ಪರಿಣಾಮ ಆ ಭಾಗಗಳ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದು, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್, ಯಾದಗಿರಿ ಜಿಲ್ಲೆಗಳ ವಿದ್ಯಾರ್ಥಿಗಳು ಮಾತ್ರ ಪ್ರವೇಶಾತಿ ಪಡೆಯಲಿಚ್ಛಿಸಿದ್ದಾರೆ.

ಕಂಪ್ಯೂಟರ್ ವಿಜ್ಞಾನದ ಕೋರ್ಸಿಗೆ ಹೆಚ್ಚಿದ ಬೇಡಿಕೆ: ಕಂಪ್ಯೂಟರ್ ವಿಜ್ಞಾನದ ಕೋರ್ಸಿಗೆ ಭಾರಿ ಬೇಡಿಕೆ ಬಂದಿದೆ. ಸಿವಿಲ್ ಹಾಗೂ ಎಲೆಕ್ಟ್ರಿಕಲ್ ಮೆಕಾನಿಕಲ್ ಇಂಜಿನಿಯರಿಂಗ್ ಕೋರ್ಸ್​ಗಳಿಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ ಎನ್ನಲಾಗಿದೆ.

ಆರ್​​ವೈಎಂಇಸಿ ಕಾಲೇಜಿನ ಉಪಪ್ರಾಚಾರ್ಯ ಪ್ರೊ.ಟಿ.ಹನುಮಂತರೆಡ್ಡಿ

760 ಸೀಟುಗಳ ಭರ್ತಿಯ ಗುರಿ:ಆರ್​ವೈಎಂಇಸಿ ಕಾಲೇಜಿನಲ್ಲಿ ಅಂದಾಜು 760 ಸೀಟುಗಳ ಭರ್ತಿಯ ಗುರಿ ಹೊಂದಲಾಗಿದೆ. ಆ ಪೈಕಿ ಈವರೆಗೂ 400 ಸೀಟುಗಳು ಭರ್ತಿಯಾಗಿದ್ದು, ಸಿಇಟಿ ಮೂಲಕ ಆಯ್ಕೆಯಾದ 100 ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲಾಗಿದೆ.

ಈ ಸಂಬಂಧ ಈಟಿವಿ ಭಾರತದೊಂದಿಗೆ ಮಾತನಾಡಿದ ಆರ್​​ವೈಎಂಇಸಿ ಕಾಲೇಜಿನ ಉಪಪ್ರಾಚಾರ್ಯ ಪ್ರೊ.ಟಿ.ಹನುಮಂತರೆಡ್ಡಿ, ಕೋವಿಡ್-19 ಹಿನ್ನೆಲೆಯಲ್ಲಿ ತಾಂತ್ರಿಕ ಕೋರ್ಸುಗಳಿಗೆ ದಾಖಲಾಗುತ್ತಿರುವವರ ಸಂಖ್ಯೆಗಿಂತ ಹೊರ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ. ಅಂದಾಜು 650 ಸೀಟುಗಳ ಭರ್ತಿಯಾಗುವ ಸಾಧ್ಯತೆ ಇದೆ. ಆ ಪೈಕಿ 300 ಸೀಟುಗಳನ್ನು ಸರ್ಕಾರಿ ಕೋಟಾದಡಿ ಭರ್ತಿ ಮಾಡಿಕೊಳ್ಳಲಾಗುವುದು ಎಂದರು.

ABOUT THE AUTHOR

...view details