ಬಳ್ಳಾರಿ: ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ನಿಮ್ಮೆಲ್ಲರ ಶುಭ ಹಾರೈಕೆಯಿಂದ ಕೋವಿಡ್ ಸೋಂಕಿನ ಪರೀಕ್ಷೆ ನೆಗೆಟಿವ್ ಬಂದಿದೆ. ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದು, ಸಾರ್ವಜನಿಕ ಸೇವೆಗೆ ಮರುಳುತ್ತೇನೆ. ಶೀಘ್ರ ಗುಣಮುಖನಾಗಲು ನನಗೆ ಅತ್ಯುತ್ತಮ ಚಿಕಿತ್ಸೆ ನೀಡಿದ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿಗೆ ವಿಶೇಷ ಕೃತಜ್ಞತೆಗಳು ಎಂದು ಟ್ವೀಟ್ ಮಾಡಿದ್ದಾರೆ .
ಈ ಸಂದರ್ಭದಲ್ಲಿ ಸಹಕಾರ ನೀಡಿದ ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರಿಗೂ ಮತ್ತು ಸಂಪುಟದ ಸಹೋದ್ಯೋಗಿಗಳಿಗೂ ಹಾಗೂ ನನ್ನ ಆರೋಗ್ಯಕ್ಕಾಗಿ ಶುಭ ಹಾರೈಸಿದ ಬಂಧುಗಳು, ಸ್ನೇಹಿತರು, ಹಿತೈಷಿಗಳು ಮತ್ತು ಅಭಿಮಾನಿಗಳಿಗೆ ಮತ್ತೊಮ್ಮೆ ಹೃದಯದಪೂರ್ವಕ ಧನ್ಯವಾದಗಳನ್ನ ಎಂದು ಟ್ವೀಟ್ ಮಾಡಿದ್ದಾರೆ.
ಅಲ್ಲದೆ ಇಂದಿನಿಂದ ಸಾರ್ವಜನಿಕ ಸೇವೆಗೆ ಮರಳುವುದಾಗಿ ತಿಳಿಸಿದ್ದಾರೆ. ಶ್ರೀರಾಮುಲುಗೆ ಕೊರೊನಾ ಪಾಸಿಟಿವ್ ಬಂದು ಬೆಂಗಳೂರು ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬಂದು ಬಳ್ಳಾರಿಯ ಮನೆಯಲ್ಲಿ ಕ್ವಾರಂಟೈನ್ನಲ್ಲಿದ್ದರು.