ಕರ್ನಾಟಕ

karnataka

ETV Bharat / state

ನಿಯಮಾವಳಿ ಪಾಲಿಸದ ಸೋಂಕಿತರು ಕೋವಿಡ್​ ಕೇರ್​ ಸೆಂಟರ್​ಗೆ ಶಿಫ್ಟ್​ : ಸಚಿವ ಆನಂದಸಿಂಗ್ - Anandh sing talk about coorna patients

ಹೋಂ ಐಸೋಲೇಷನ್‍ನಲ್ಲಿರುವ ಸೋಂಕಿತರು ಅನಗತ್ಯವಾಗಿ ತಿರುಗಾಡಿ ಇತರರಿಗೆ ವೈರಸ್​ ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಆರೋಪಿಸಿದ್ದಾರೆ. ಕೊರೊನಾ ನಿಯಮ ಉಲ್ಲಂಘಿಸುವ ಸೋಂಕಿತರನ್ನು ಕೋವಿಡ್​ ಕೇರ್​ ಸೆಂಟರ್​ಗೆ ಸ್ಥಳಾಂತರಿಸಲಾಗುವುದು ಎಂದಿದ್ದಾರೆ.

ananda-singh
ಸಚಿವ ಆನಂದಸಿಂಗ್

By

Published : May 12, 2021, 4:36 PM IST

ಬಳ್ಳಾರಿ: ಜಿಲ್ಲೆಯಲ್ಲಿ ಹೋಂ ಐಸೋಲೇಷನ್‍ನಲ್ಲಿರುವ ಸೋಂಕಿತರು ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದಿರುವ ಕಾರಣ ಅವರನ್ನು ಕೋವಿಡ್ ಕೇರ್ ಸೆಂಟರ್​ಗಳಿಗೆ ಶಿಫ್ಟ್ ಮಾಡಲು ನಿರ್ಧರಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ತಮ್ಮನ್ನು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೋಂ ಐಸೋಲೇಷನ್‍ನಲ್ಲಿರುವ ಸೋಂಕಿತರು ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಜಿಲ್ಲಾಡಳಿತ ನೇಮಿಸಿದ ತಂಡಗಳು ಪರಿಶೀಲನೆಗೆ ತೆರಳಿದ ಸಂದರ್ಭದಲ್ಲಿ ಮಾತ್ರ ಮನೆಯಲ್ಲಿರುತ್ತಿದ್ದಾರೆ. ನಂತರ ಹೊರಗಡೆ ಅನಗತ್ಯ ತಿರುಗಾಟ ಹಾಗೂ ಇನ್ನಿತರರಿಗೆ ಸೋಂಕು ಪಸರಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬರುವುದರ ಬದಲಿಗೆ ಹೆಚ್ಚಿನ ಪ್ರಕರಣಗಳು ದೃಢಪಡುವಂತಾಗಿದೆ. ಜಿಲ್ಲಾಡಳಿತ ಅನೇಕ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡರೂ ಸಹ ನಿಯಂತ್ರಣಕ್ಕೆ ಬರದ ಹಿನ್ನೆಲೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದರು.

ಜಿಲ್ಲೆಯಲ್ಲಿ 14 ಸಾವಿರ ಜನರು ಹೋಂ ಐಸೋಲೇಷನ್‍ನಲ್ಲಿದ್ದು, ಮೊದಲಿಗೆ ಅತಿಹೆಚ್ಚಿನ ಸೋಂಕು ಪ್ರಕರಣಗಳು ವರದಿಯಾಗಿರುವ ಪ್ರದೇಶಗಳಲ್ಲಿನ ಸೋಂಕಿತರನ್ನು ಆದ್ಯತೆ ಮೇರೆಗೆ ಈಗಾಗಲೇ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್​ಗಳಿಗೆ ಪೊಲೀಸ್ ಸಿಬ್ಬಂದಿಯ ಸಹಕಾರದೊಂದಿಗೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು.

ಈಗಾಗಲೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಪಂ ಸಿಇಒ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲೆಯ 11 ತಾಲೂಕುಗಳ ಪ್ರವಾಸ ಮಾಡಿ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಅಲ್ಲಿರುವ ಅವ್ಯವಸ್ಥೆಗಳನ್ನು ಸರಿಪಡಿಸಲಾಗಿದೆ. ಎರಡು ದಿನಗಳ ಹಿಂದಷ್ಟೇ ನಗರದ ಬಿಡಿಎಎ ಫುಟ್ಬಾಲ್ ಮೈದಾನದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ತಜ್ಞರ ಸಭೆ ಕರೆದು ಸಲಹೆಗಳನ್ನು ಪಡೆದು ಇಡೀ ಬಳ್ಳಾರಿ ಜಿಲ್ಲೆಯನ್ನು ಸಂಪೂರ್ಣ ಲಾಕ್‍ಡೌನ್ ಮಾಡಲಾಗಿದೆ ಎಂದು ವಿವರಿಸಿದರು.

ಜಿಂದಾಲ್ ಎದುರುಗಡೆ ನಿರ್ಮಾಣವಾಗುತ್ತಿರುವ 1 ಸಾವಿರ ಆಕ್ಸಿಜನ್ ಬೆಡ್ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ ಕಾರ್ಯವನ್ನು ಈಗಷ್ಟೇ ಪರಿಶೀಲಿಸಿ ಬಂದಿದ್ದು, ಅಲ್ಲಿ ಎಲೆಕ್ಟ್ರಿಕಲ್​​ ಕಾರ್ಯ ನಡೆಯುತ್ತಿದೆ. ನಾಲ್ಕು ದಿನಗಳಲ್ಲಿ ಈ ಕಾರ್ಯ ಪೂರ್ಣಗೊಂಡು 300 ಆಕ್ಸಿಜನ್ ಬೆಡ್‍ಗಳೊಂದಿಗೆ ತಾತ್ಕಾಲಿಕ ಆಸ್ಪತ್ರೆ ಆರಂಭವಾಗಲಿದೆ. ಈಗಾಗಲೇ ತಜ್ಞವೈದ್ಯರು, ವೈದ್ಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ನೇಮಕ ಪ್ರಕ್ರಿಯೆ ಆರಂಭವಾಗಿದ್ದು, ಆದೇಶ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಓದಿ:ಜೀವ ರಕ್ಷಕವೆಂದೇ ಭಾವಿಸಿರುವ ಕೋವಿಡ್​ ಲಸಿಕೆಗೆ ಮೈಸೂರಿನಲ್ಲೂ ಹಾಹಾಕಾರ!

ABOUT THE AUTHOR

...view details