ಬಳ್ಳಾರಿ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ನಗರದ ಕಪ್ಪಗಲ್ಲು ರಸ್ತೆಯ ನಿವಾಸಿ 85 ವರ್ಷದ ವಯೋವೃದ್ಧೆ ಸಾವನ್ನಪ್ಪಿದ್ದಾರೆಂದು ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ಸ್ಪಷ್ಟಪಡಿಸಿದ್ದಾರೆ.
ಬಳ್ಳಾರಿಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿ - ಬಳ್ಳಾರಿ ಕೊರೊನಾ ಅಪ್ಡೇಟ್
ಬಳ್ಳಾರಿಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿದೆ.
ಬಳ್ಳಾರಿ
ಬಹು ಅಂಗಾಂಗಗಳ ವೈಫಲ್ಯತೆಯಿಂದ ಬಳಲುತ್ತಿದ್ದ ವಯೋವೃದ್ಧೆಯು ಕಳೆದ ಜೂನ್ 17ರಂದು ನಗರದ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ಪರೀಕ್ಷೆಯ ಸಂಬಂಧ ಸ್ವ್ಯಾಬ್ ಕಲೆಕ್ಟ್ ಮಾಡಲಾಗಿತ್ತು. ತಪಾಸಣೆ ವರದಿ ಬಂದ ಬಳಿಕ ಕೊರೊನಾ ಪಾಸಿಟಿವ್ ಎಂದು ದೃಢಪಟ್ಟಿತ್ತು.
ಆ ವಯೋವೃದ್ಧೆಯನ್ನ ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿರಿಸಲಾಗಿತ್ತು. ಆದರೆ ಸೋಮವಾರ ಬೆಳಗ್ಗೆ ಅವರು ಸಾವನ್ನಪ್ಪಿದ್ದಾರೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.