ಬಳ್ಳಾರಿ:ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಗುರುವಾರ 3,618 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 62,272 ಜನರು ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ನಿನ್ನೆ 1,109 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದರೆ, 22 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 80,933ಕ್ಕೆ ಏರಿಕೆಯಾಗಿದೆ. ಉಭಯ ಜಿಲ್ಲೆಗಳಲ್ಲಿನ ಮೃತರ ಸಂಖ್ಯೆ 1,163ಕ್ಕೆ ತಲುಪಿದೆ. ಸದ್ಯ 17,498 ಸಕ್ರಿಯ ಪ್ರಕರಣಗಳಿವೆ.