ಬಳ್ಳಾರಿ:ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾನುವಾರ ಒಂದೇ ದಿನ 2,141 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದರೆ 21 ಜನರು ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ 62,415ಕ್ಕೆ ಏರಿಕೆಯಾಗಿದೆ.
ಉಭಯ ಜಿಲ್ಲೆಗಳಲ್ಲಿ ಮೃತರ ಸಂಖ್ಯೆ 908ಕ್ಕೆ ಏರಿಕೆಯಾಗಿದೆ. 507 ಜನರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 47,148 ಆಸ್ಪತ್ರೆಯಿಂದ ಡಿಶ್ಚಾರ್ಜ್ ಆಗಿದ್ದಾರೆ. ಸದ್ಯ 14,359 ಸಕ್ರಿಯ ಪ್ರಕರಣಗಳಿವೆ.