ಬಳ್ಳಾರಿ:ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಮತ್ತೊಂದು ಕೊರೊನಾ ವೈರಸ್ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 14 ವರ್ಷದ ಬಾಲಕನಲ್ಲಿ ಈ ವೈರಸ್ ಪತ್ತೆಯಾಗಿದೆ.
ಗಣಿನಾಡಿನಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆ! - ಬಳ್ಳಾರಿಯಲ್ಲಿ ಬಾಲಕನಿಗೆ ಕೊರೊನಾ
ಬಳ್ಳಾರಿಯಲ್ಲಿ 14 ವರ್ಷದ ಬಾಲಕನಿಗೆ ಕೊರೊನಾ ಸೋಂಕು ತಗುಲಿದೆ ಎಂದು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸ್ಪಷ್ಟಪಡಿಸಿದ್ದಾರೆ.
ಕೊರೊನಾ ಪಾಸಿಟಿವ್
ಇದು ಜಿಲ್ಲೆಯಲ್ಲಿ ಪತ್ತೆಯಾದ ನಾಲ್ಕನೆಯ ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ. ನಂಜನಗೂಡು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದವರ ಜೊತೆಗಿದ್ದು, ಮೊನ್ನೆ ತಾನೇ ನಂಜನಗೂಡಿನಿಂದ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಹಾಗಲೂರು - ಹೊಸಳ್ಳಿ ಗ್ರಾಮಕ್ಕೆ ಬಂದಿದ್ರು. ಮೂರು ದಿನಗಳಕಾಲ ಐಸೋಲೇಷನ್ ವಾರ್ಡ್ನಲ್ಲಿ ಇರಿಸಲಾಗಿತ್ತು. ಇದೀಗ ಕೋವಿಡ್-19 ತಗುಲಿರುವುದು ಸೋಂಕು ಧೃಡಪಟ್ಟಿದೆ.
ಈ ಬಾಲಕ ಸಿರುಗುಪ್ಪ ತಾಲೂಕು ಮೂಲದವನಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.