ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 164 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 31107 ಕ್ಕೇರಿಕೆಯಾಗಿದೆ.
ಬಳ್ಳಾರಿಯಲ್ಲಿಂದು ಹೊಸದಾಗಿ 164 ಕೊರೊನಾ ಪಾಸಿಟಿವ್ ಕೇಸ್ ಪತ್ತೆ…! - ಬಳ್ಳಾರಿಯಲ್ಲಿ ಕೊರೊನಾ ಪ್ರಕರಣ ಏರಿಕೆ ನ್ಯೂಸ್
ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಈ ದಿನ 164 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದ್ದು, 6 ಜನ ಇಂದು ಸೋಂಕಿನಿಂದ ಮೃತಪಟ್ಟಿದ್ದಾರೆ.
ಪಾಸಿಟಿವ್ ಕೇಸ್ ಪತ್ತೆ
ಇಂದು ಆರು ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಅಂದಾಜು 1489 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಕೇರ್ ಸೆಂಟರ್ ಹಾಗೂ ಹೋಂ ಐಸೋಲೇಷನ್ ನಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 28050 ಮಂದಿ ಗುಣಮುಖರಾಗಿದ್ದಾರೆ. 458 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಸದ್ಯ 2599 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಾಹಿತಿ ನೀಡಿದ್ದಾರೆ.