ಕರ್ನಾಟಕ

karnataka

By

Published : Apr 11, 2021, 3:57 PM IST

ETV Bharat / state

ಏ. 14ರವರೆಗೆ ಕೋವಿಡ್ ಲಸಿಕಾ ಉತ್ಸವ: ಬಳ್ಳಾರಿ ಆರ್​ಸಿಹೆಚ್​​​

ಪ್ರಸ್ತುತ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಗ್ರಾಮ ಮಟ್ಟದಲ್ಲಿರುವ ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ಲಸಿಕೆ ಹಾಕಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ.

Covid
Covid

ಬಳ್ಳಾರಿ:45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರು ತಪ್ಪದೇ ಕೋವಿಡ್ ಲಸಿಕೆ ಹಾಕಿಸಿಕೊಂಡು ಕೊರನಾ ವೈರಸ್​​​ನಿಂದ ಉಂಟಾಗುವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತಕ್ಕೆ ಸಹಕರಿಸಬೇಕು ಎಂದು ಜಿಲ್ಲಾ ಆರ್‌ಸಿಹೆಚ್‌ ಡಾ. ಅನಿಲ್ ಕುಮಾರ್‌ ಹೇಳಿದರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಶ್ರಯ ಕಾಲೋನಿ ನಗರ ಆರೋಗ್ಯ ಕೇಂದ್ರ ಇವರ ಆಶ್ರಯದಲ್ಲಿ ಏ. 11ರಿಂದ 14ರವರೆಗೆ ಜರಗುವ ಲಸಿಕಾ ಉತ್ಸವವನ್ನು ನಗರದ ಆಶ್ರಯ ಕಾಲೋನಿ ನಗರ ಆರೋಗ್ಯ ಕೇಂದ್ರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸ್ತುತ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಗ್ರಾಮ ಮಟ್ಟದಲ್ಲಿರುವ ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ಲಸಿಕೆ ಹಾಕಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಕೋರಿದರು.

ಇಲ್ಲಿಯವರೆಗೆ 45-60 ವರ್ಷದೊಳಗಿನ 122006, ಹಾಗೂ 60 ವರ್ಷ ಮೇಲ್ಪಟ್ಟ 112654, ಆರೋಗ್ಯ ಇಲಾಖೆಯ 16899 ಮತ್ತು ಇತರ ಮುಂಚೂಣಿ ಇಲಾಖೆಯ 8374 ಜನ ಲಸಿಕೆ ಪಡೆದಿದ್ದಾರೆ ಎಂದು ವಿವರಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಮೋಹನಕುಮಾರಿ ಮಾತನಾಡಿ, ಕೋವಿಡ್ ನಿಯಂತ್ರಣಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಇದ್ದಾಗ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. 6 ಅಡಿಗಳ ವ್ಯಕ್ತಿಗತ ಅಂತರ ಕಾಪಾಡುವುದು ಹಾಗೂ ಕೈಗಳ್ಳನ್ನು ಸಾಬೂನು ಮತ್ತು ನೀರಿನಿಂದ ತೊಳೆದುಕೊಳ್ಳುವುದನ್ನು ಅಥವಾ ಸ್ಯಾನಿಟೈಸರ್ ಬಳಸುವುದನ್ನು ನಿರ್ಲಕ್ಷಿಸಬಾರದು ಮತ್ತು ಗುಂಪುಗೂಡುವುದು ಮಾಡಬಾರದು ಎಂದರು.

ABOUT THE AUTHOR

...view details