ಬಳ್ಳಾರಿ: ನಗರದ ಸಿರುಗುಪ್ಪ ರಸ್ತೆಯ ಹವಂಬಾವಿ ಪ್ರದೇಶದಲ್ಲಿ ಸಾಲಬಾಧೆ ಹಾಗೂ ಕೌಟುಂಬಿಕ ಸಮಸ್ಯೆಯಿಂದ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಳ್ಳಾರಿಯಲ್ಲಿ ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ - ಬಳ್ಳಾರಿ ವಿಮ್ಸ್ ಆಸ್ಪತ್ರೆ
ಬಳ್ಳಾರಿಯಲ್ಲಿ ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದು, ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿಷ ಸೇವಿಸಿ ದಂಪತಿ ಆತ್ಮಹತ್ಯೆ
ರಾಜಶೇಖರ್(29) ಹಾಗೂ ಸಂಧ್ಯಾ(23) ವಿಷ ಕುಡಿದು ಸಾವನ್ನಪ್ಪಿದ್ದಾರೆ. ಮಕ್ಕಳಾದ ಕೌಶಿಕ್(5) ಮತ್ತು ಭವಿತಾ(3) ಗೆ ಸಹ ವಿಷ ಕುಡಿಸಿದ್ದು, ಅದೃಷ್ಟವಶಾತ್ ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದು, ವಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಗರದ ವಿಮ್ಸ್ ಶವಾಗಾರದಲ್ಲಿ ದಂಪತಿಯ ಮೃತದೇಹಗಳನ್ನು ಒಂದೇ ರೆಫ್ರಿಜಿರೇಟರ್ನಲ್ಲಿ ಇಡಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.