ಹೊಸಪೇಟೆ/ವಿಜಯನಗರ: ಹಗರಿಬೊಮ್ಮನಹಳ್ಳಿ ತಾಲೂಕಿನ ವರಲಹಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯಲ್ಲಿ ಶೀಘ್ರದಲ್ಲೇ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುವುದು. ಒಟ್ಟು 100 ಬೆಡ್‌ಗಳನ್ನು ಹೊಂದಿರುವ ಕೇಂದ್ರದಲ್ಲಿ ಸಮರ್ಪಕ ಚಿಕಿತ್ಸೆ ಒದಗಿಸಲಾಗುವುದು ಎಂದು ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಹೇಳಿದರು.
100 ಬೆಡ್ಗಳ ಕೋವಿಡ್ ಕೇರ್ ಸೆಂಟರ್ ಆರಂಭಕ್ಕೆ ಕ್ರಮ: ಶಾಸಕ ಭೀಮಾನಾಯ್ಕ - MLA Bhimanayaka
ಹಗರಿಬೊಮ್ಮನಹಳ್ಳಿ ತಾಲೂಕಿನ ವರಲಹಳ್ಳಿ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯಲ್ಲಿ ಶೀಘ್ರದಲ್ಲೇ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುವುದು ಎಂದು ಶಾಸಕ ಭೀಮಾನಾಯ್ಕ ಹೇಳಿದರು.
ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‌ಡೌನ್ ವೇಳೆ ತೋಟಗಾರಿಕೆ ಬೆಳೆಗಾರರಿಗೆ ಉತ್ಪನ್ನಗಳ ಮಾರಾಟಕ್ಕೆ ತೊಂದರೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ರೈತ ಸಂಘದ ಜೆ.ಎಂ.ವೀರಸಂಗಯ್ಯ, ಸಿದ್ದನಗೌಡ ಸೇರಿದಂತೆ ಹಲವರ ಜತೆ ಚರ್ಚಿಸಿ, ಪ್ರಮುಖವಾಗಿ ಮಲ್ಲಿಗೆ, ಅಂಜೂರು, ಟೊಮೆಟೊ ಸೇರಿ ನಾನಾ ಬೆಳೆಗಳ ಮಾರಾಟಕ್ಕೆ ಅಡ್ಡಿಯಾಗದಂತೆ ಪಾಸ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಮಸ್ಯೆ ಪರಿಹಾರಕ್ಕೆ ಚರ್ಚೆ ನಡೆಸಿ, ಅಗತ್ಯ ಪರಿಹಾರ ಕ್ರಮ ಕೈಗೊಳ್ಳಲಾಗಿದೆ ಎಂದರು.
ಮಲ್ಲಿಗೆ ಬೆಳೆಗಾರರು ಶಿವಮೊಗ್ಗ, ಕೊಟ್ಟೂರು ಸೇರಿ ಹಲವೆಡೆ ಬೈಕ್‌ಗಳಲ್ಲಿ ಬೆಳೆಯ ಚೀಲಗಳನ್ನು ಸಾಗಣೆ ಮಾಡುತ್ತಿದ್ದಾರೆ. ಲಾಕ್‌ಡೌನ್ ವೇಳೆಯ ಬೆಳಗ್ಗೆ 10 ಗಂಟೆ ಬಳಿಕವೂ ಸಾಗಣೆಗೆ ಅಡ್ಡಿಯಾಗದಂತೆ ಬೆಳೆಗಾರರಿಗೆ ಪಾಸ್ ನೀಡುವಂತೆ ಸೂಚನೆ ನೀಡಲಾಗಿದೆ. ತಹಶೀಲ್ದಾರ್ ಮತ್ತು ತೋಟಗಾರಿಕೆ ಸಹಾಯಕ ನಿರ್ದೇಶಕರು ಬೆಳೆಗಾರರ ಪಟ್ಟಿ ಸಿದ್ಧಪಡಿಸಿದ್ದು, ಅಗತ್ಯವಿರುವವರಿಗೆ ಪಾಸ್ ನೀಡಲಾರಂಭಿಸಿದ್ದಾರೆ ಎಂದು ಶಾಸಕ ಭೀಮಾನಾಯ್ಕ ತಿಳಿಸಿದರು.