ಬಳ್ಳಾರಿ :ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಗರ್ಭಿಣಿಯೊಬ್ಬರು ಅವಳಿ-ಜವಳಿ ಮಕ್ಕಳಿಗೆ ಜನ್ಮ ನೀಡಿದ ಇಡೀ ರಾಜ್ಯದ ವಿಶೇಷ ಗಮನ ಸೆಳೆದಿದ್ದಾರೆ.
ಬಳ್ಳಾರಿಯ ಡಾ.ರಾಜ್ ರಸ್ತೆಯಲ್ಲಿರುವ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ (ಕೋವಿಡ್ ಕೇರ್) ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎನ್ ಬಸರೆಡ್ಡಿಯವರ ನೇತೃತ್ವದಲ್ಲಿ ಸೋಂಕಿತ ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಮಾಡಲಾಗಿದೆ. ಬೆಳಗ್ಗೆ 8.35ರ ಸುಮಾರು ಗಂಡು ಮತ್ತು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಗರ್ಭಿಣಿ. ತಾಯಿ-ಮಕ್ಕಳು ಆರೋಗ್ಯವಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ತಿಳಿಸಿದ್ದಾರೆ.