ಕರ್ನಾಟಕ

karnataka

ETV Bharat / state

ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ

ಹೊಸಪೇಟೆ ತಾಲೂಕಿನ‌ ಪಾಪಿನಾಯಕನಹಳ್ಳಿ ಗ್ರಾಮ ಪಂಚಾಯತ್ ಮುಂಭಾಗ ಸಿಪಿಐ(ಎಂ) ಕಾರ್ಯಕರ್ತರು ಕೇಂದ್ರ ಸರ್ಕಾರದ ಖಾಸಗೀಕರಣ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.

Protest
Protest

By

Published : Aug 26, 2020, 10:48 AM IST

ಹೊಸಪೇಟೆ: ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ ತಾಲೂಕಿನ‌ ಪಾಪಿ ನಾಯಕನಹಳ್ಳಿ ಗ್ರಾಮ ಪಂಚಾಯತ್ ಮುಂಭಾಗ ಸಿಪಿಐ(ಎಂ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದೇಶದ ಸಾರ್ವಜನಿಕ ಸಂಪತ್ತನ್ನು ಖಾಸಗೀಕರಣ ಮಾಡುವುದು ಖಂಡನೀಯ.‌ ಕೊರೊನಾ ವೈರಸ್ ನಿಂದಾಗಿ ಜನರ ಬದುಕು ಸಂಕಷ್ಟದಲ್ಲಿ ಸಿಲುಕಿದೆ. ಈ ವೇಳೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ಸಂಪತ್ತನ್ನು ಖಾಸಗಿ ಕಂಪನಿಗಳಿಗೆ ಮಾರಾಟ ಮಾಡುತ್ತಿವೆ. ಬಡತನ, ನಿರುದ್ಯೋಗ, ಹಸಿವು ಮತ್ತು ಅನಾರೋಗ್ಯ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆರ್ಥಿಕ ಮುಗ್ಗಟ್ಟಿನಿಂದ ದೇಶ ತತ್ತರಿಸಿ ಹೋಗುತ್ತಿದೆ. ಹಾಗಾಗಿ ಸರ್ಕಾರ ಖಾಸಗೀಕರಣವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.‌

ಬಳಿಕ ಗ್ರಾಮ ಪಂಚಾಯಿತಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ವೇಳೆ, ಮುಖಂಡರಾದ ಕೆ.ನಾಗರತ್ನಮ್ಮ, ಎಸ್.ಯಲ್ಲಮ್ಮ, ಸ್ವಾಮಿ ಇನ್ನಿತರರಿದ್ದರು.

ABOUT THE AUTHOR

...view details