ಹೊಸಪೇಟೆ (ಬಳ್ಳಾರಿ): ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಿದ್ದರೆ ಅಧಿಕಾರಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗುತ್ತದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಹೇಳಿದರು.
ನಗರದ ತಾಲೂಕು ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಅಧಿಕಾರಿಗಳು ನಿಷ್ಕಾಳಜಿಯನ್ನು ತೋರಿಸಬಾರದು, ಅನುದಾನವನ್ನು ಸರಿಯಾಗಿ ಬಳಕೆ ಮಾಡದಿದ್ದರೇ ಸರಕಾರ ಪ್ರಶ್ನೆ ಮಾಡಲಿದೆ. ಆಗ ಎಲ್ಲರಿಗೂ ಕೆಟ್ಟ ಹೆಸರು ಎಂದು ಹೇಳಿದರು.
ಕೆಡಿಪಿ ಸಭೆಯಲ್ಲಿ ಇಒ ಎಚ್ಚರಿಕೆ ಕೃಷಿ ಅಧಿಕಾರಿ ನಾಗರತ್ನಮ್ಮ ಮಾತನಾಡಿ, ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅನುದಾನ ಬಂದಿಲ್ಲ. ಯಾಕೆ ಎಂದು ಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿದರೆ, ಸಾಮಾನ್ಯ ವರ್ಗದವರು ಎಸ್ಸಿಎಸ್ಪಿ ಮತ್ತು ಟಿಎಸ್ಪಿ ದಾಖಲೆಗಳನ್ನು ನೀಡುವ ಯೋಜನೆಯನ್ನು ಪಡೆಯುತ್ತಿದ್ದಾರೆ. ಹಾಗಾಗಿ ಅನುದಾನ ನೀಡುತ್ತಿಲ್ಲ. ಸಾಮಾನ್ಯ ವರ್ಗದವರಿಗೆ ಹೆಚ್ಚಿನ ಅನುದಾನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ವಸಂತ ಅವರು ಮಾತನಾಡಿ, ಯಾವುದೇ ಲಿಖಿತ ರೂಪದಲ್ಲಿ ದೂರುಗಳು ಬಂದಿಲ್ಲ. ಅಲ್ಲದೇ, ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕುರಿತು ಮಾಹಿತಿ ನೀಡಿ ಎಂದು ತಾಲೂಕು ಅಧಿಕಾರಿಗಳಿಗೆ ತಿಳಿಸಲಾಗಿತ್ತು. ಆದರೆ, ಯಾವ ಅಧಿಕಾರಿ ಸ್ಪಂದಿಸಿಲ್ಲ ಎಂದು ಸಭೆಯ ಗಮನಕ್ಕೆ ತಂದರು.