ಕರ್ನಾಟಕ

karnataka

ETV Bharat / state

ಗಣಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಉಂಟಾದ ಬೆಳೆನಷ್ಟವೆಷ್ಟು...? - crops destroyed in bellary

ಬಳ್ಳಾರಿ ಜಿಲ್ಲೆ ಸುರಿದ ಬಾರಿ ಮಳೆಯಿಂದ ಅಪಾರ ಪ್ರಮಾಣ ಬೆಳೆ ನಷ್ಟವಾಗಿದೆ. ಮುಖ್ಯವಾಗಿ ಬಳ್ಳಾರಿ ಹಾಗೂ ಸಂಡೂರು ತಾಲೂಕಿನಲ್ಲಿ ಹೆಚ್ಚು ಪ್ರಮಾಣ ಬೆಳೆ ನಷ್ಟವಾಗಿದೆ ಎಂದು ಕೃಷಿ ಇಲಾಖೆ ಅಂದಾಜಿಸಿದೆ.

crops destroyed due to heavy rain fall
ಗಣಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಉಂಟಾದ ಬೆಳೆನಷ್ಟ

By

Published : Sep 16, 2020, 6:55 PM IST

ಬಳ್ಳಾರಿ: ಮೂರು ದಿನಗಳಿಂದ ಗಣಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಅಂದಾಜು 353.00 ಹೆಕ್ಟರ್​ ಪ್ರದೇಶದ ಬೆಳೆ ನಾಶವಾಗಿದೆ. ಬಳ್ಳಾರಿ ಹಾಗೂ ಸಂಡೂರು ತಾಲೂಕಿನಲ್ಲಿ ಹೆಚ್ಚು ಪ್ರಮಾಣ ಬೆಳೆನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ.

ಗಣಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಉಂಟಾದ ಬೆಳೆನಷ್ಟ

ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಅಂದಾಜು 30 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಈ ಭಾರಿ ಬಿತ್ತನೆಯ ಗುರಿಯನ್ನು ಹೊಂದಲಾಗಿತ್ತು. ಆ ಪೈಕಿ 29,792 ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಮುಕ್ತಾಯಗೊಂಡಿದೆ. ಇದಲ್ಲದೇ ಬಳ್ಳಾರಿ ತಾಲೂಕಿನಾದ್ಯಂತ ಅಂದಾಜು 58,549 ಹೆಕ್ಟರ್ ಪ್ರದೇಶದಲ್ಲಿ ಈ ಬಾರಿ ಬಿತ್ತನೆಯ ಗುರಿ ಹೊಂದಲಾಗಿತ್ತು. ಆ ಪೈಕಿ 52,143 ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಮುಕ್ತಾಯ ಗೊಂಡಿದೆ ಎಂದು ಕೃಷಿ ಇಲಾಖೆ ಮೂಲಗಳು ತಿಳಿಸಿವೆ.

ಬಳ್ಳಾರಿ ತಾಲೂಕು ಶೇ.89 ರಷ್ಟು ಬಿತ್ತನೆ ಗುರಿಯಲ್ಲಿ, ಶೇ.72.86ರಷ್ಟು ಪ್ರದೇಶ ವ್ಯಾಪ್ತಿಯಲ್ಲಿ ಬೆಳೆನಷ್ಟ ಉಂಟಾಗಿರುವುದು ಕೃಷಿ ಇಲಾಖೆ ಮಾಹಿತಿ ನೀಡಿದೆ. ಇನ್ನೂ ಸಂಡೂರು ತಾಲೂಕಿನಲ್ಲಿ ಶೇ.99.3ರಷ್ಟು ಬಿತ್ತನೆ ಗುರಿಯಲ್ಲಿ ಶೇ.40.72 ರಷ್ಟು ಪ್ರದೇಶದಲ್ಲಿ ಬೆಳೆನಷ್ಟ ಉಂಟಾಗಿರಬಹುದೆಂದು ಕೃಷಿ ಇಲಾಖೆಯು ಅಂದಾಜಿಸಿದೆ.

ಬಳ್ಳಾರಿ ತಾಲೂಕಿನಲ್ಲಿ ಬೆಳೆದ ಜೋಳ, ಮೆಕ್ಕೆಜೋಳ, ಹತ್ತಿ ಹಾಗೂ ಶೇಂಗಾ ಬೆಳೆಗಳು ಸಂಪೂರ್ಣವಾಗಿ ನಷ್ಟ ಉಂಟಾಗಿವೆ. ಹೀಗಾಗಿ, ಬೆಳೆನಷ್ಟದ ಅಂದಾಜು ಪಟ್ಟಿ ಸಮೀಕ್ಷೆಯ ಮೂಲಕ ತಯಾರಿಸಲಾಗಿದ್ದು, ಸೆಪ್ಟೆಂಬರ್ 9ರಂದು ಸುರಿದ ಭಾರೀ ಮಳೆಗೆ ಇಷ್ಟೊಂದು ಪ್ರಮಾಣದ ಹಾನಿ ಉಂಟಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಜಿಲ್ಲೆಯ ಪಶ್ಚಿಮ ತಾಲೂಕುಗಳಲ್ಲೂ‌ ಕೂಡ ಈ ಬೆಳೆನಷ್ಟದ ಸಮೀಕ್ಷೆ ಕಾರ್ಯ ಮುಂದುವರೆದಿದೆ. ಅತೀ ಶೀಘ್ರದಲ್ಲಿಯೇ ಬೆಳೆ ನಷ್ಟದ ಸಂಪೂರ್ಣ ಮಾಹಿತಿಯ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ‌ ಕಳುಹಿಸಿಕೊಡಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ‌‌‌ ನಿರ್ದೇಶಕ ಶರಣಪ್ಪ ಮುದುಗಲ್ ಈ ಟಿವಿ ಭಾರತ್​ಗೆ ತಿಳಿಸಿದರು.

ABOUT THE AUTHOR

...view details